ಓದುಗರ ಪತ್ರ
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ ಎಂಬುದನ್ನೇ ಮುಂದಿಟ್ಟುಕೊಂಡು ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡುವುದು ಸಮಂಜಸವಲ್ಲ . ಮೆಟ್ರೋ ಪ್ರಯಾಣ ದರ ಶೇ. ೧೦ರಿಂದ ಶೇ. ೧೫ಕ್ಕೆ ಏರಿಕೆಯಾಗಿದ್ದರೆ ಪ್ರಯಾಣಿಕರು ಇದು ಅನಿವಾರ್ಯವೆಂದು ವಾಸ್ತವದ ನೆಲೆಗಟ್ಟಿನಲ್ಲಿ ಸ್ಪಂದಿಸುತ್ತಿದ್ದರೇನೊ? ಆದರೆ ಸರ್ಕಾರ ಏಕಾಏಕಿ ಶೇ. ೪೫ರಷ್ಟು ಏರಿಕೆ ಮಾಡಿರುವುದರಿಂದ ಗ್ರಾಹಕರು ಇದು ‘ನಮ್ಮ ಮೆಟ್ರೋ’ ಅಲ್ಲ ‘ಉಳ್ಳವರ ಮೆಟ್ರೋ’ ಎನ್ನುವಂತಾಗಿದೆ. ಸದ್ಯ ಪ್ರಯಾಣ ದರ ಏರಿಕೆಯಿಂದ ಬೇಸತ್ತ ಪ್ರಯಾಣಿಕರು ಮೆಟ್ರೋ ಬಿಟ್ಟು ರಸ್ತೆ ಸಾರಿಗೆಯ ಮೊರೆ ಹೋಗಿದ್ದು, ಇದರಿಂದಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯಂತೆ. ಇದು ಮೆಟ್ರೋ ನಿಗಮದ ಕಣ್ಣು ತೆರೆಸಬೇಕು ಮತ್ತು ಅದು ತನ್ನ ನಿಧಾರವನ್ನು ಮರುಪರಿಶೀಲಿಸುವಂತೆ ಮಾಡಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…