ಓದುಗರ ಪತ್ರ

ಓದುಗರ ಪತ್ರ: ಪೇಜಾವರ ಶ್ರೀಗಳ ಹೇಳಿಕೆ ಖಂಡನೀಯ

ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯಿಂದ ಬದುಕುವ ಅವಕಾಶ ಕಲ್ಲಿಸುವ ಸಲುವಾಗಿ ಮತ್ತು ಎಲ್ಲ ಜಾತಿ, ಧರ್ಮದವರನ್ನೂ ಪರಿಗಣಿಸಿ ಸಲ್ಲುವಂತೆ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಜಿಸಿದ್ದಾರೆ. ಹೀಗಿದ್ದರೂ ಪೇಜಾವರ ಮಠದ ಶ್ರೀಗಳು ‘ನಮ್ಮನ್ನೂ ಗೌರವಿಸುವಂತಹ ಸಂವಿಧಾನ ಜಾರಿಗೆ ಬರಬೇಕು’ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೋ ತಿಳಿಯದು.

ದೇಶದಲ್ಲಿನ ಪ್ರತಿಯೊಬ್ಬರಿಗೂ ವ್ಯಕ್ತಿ ಗೌರವಕ್ಕೆ ಧಕ್ಕೆಯಾಗದಂತ ಕಾನೂನು ರಚಿಸಿ ಎಲ್ಲರೂ ಸಮಾನವಾಗಿ, ಪರಸ್ಪರ ಗೌರವಯುತವಾಗಿ ಬದುಕುವ ಅವಕಾಶವನ್ನು ಸಂವಿಧಾನಕಲ್ಲಿಸಿದೆ. ಹೀಗಿರುವಾಗಬೇಕಾದರ ಶ್ರೀಗಳ ಈ ಮನವಿಗೆ ಯಾವುದೇ ಮೌಲ್ಯವಿರುವುದಿಲ್ಲ.

ಕೇಂದ್ರ ಸರ್ಕಾರ ಈಗಾಗಲೇ ಶೇ.3ರಷ್ಟಿರುವ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದೆ. ಇದರಿಂದಾಗಿ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಿದೆ. ಇಷ್ಟಿದ್ದರೂ ಪೇಜಾವರ ಶ್ರೀಗಳು ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಕೊಡುವುದು ಖಂಡನೀಯ. ಇಂತಹ ಹೇಳಿಕೆಗಳು ಮಠ ಮಾನ್ಯಗಳ ಹಾಗೂ ಸ್ವಾಮೀಜಿಗಳ ಮೇಲಿನ ಗೌರವಕ್ಕೆ ಧಕ್ಕೆಯುಂಟು ಮಾಡಬಹುದು.

ಓ.ರಾಜು, ಅಶೋಕಪುರಂ, ಸಂಚಾಲಕರು, ದಲಿತ ಸಂಘಟನೆಗಳ ಒಕ್ಕೂಟ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago