ಓದುಗರ ಪತ್ರ
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ ಪಾರಾಗಲು ಕೆರೆ, ಕಾಲುವೆ ಅಥವಾ ಬಾವಿಗಳಿಗೆ ಈಜಲು ಹೋಗುವುದು ಸಹಜವಾದರೂ, ನೀರಿನ ಆಳ, ಹರಿವು ಮತ್ತು ಸುಳಿಗಳ ಬಗ್ಗೆ ಅರಿವಿಲ್ಲದೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಕ್ಕಳು ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಪೋಷಕರು ಸದಾ ಎಚ್ಚರದಿಂದಿರಬೇಕು ಮತ್ತು ಅವರು ಈಜಲು ಹೋದಾಗ ಮನೆಯ ಹಿರಿಯರೂ ಜೊತೆಗಿರಬೇಕು. ಕೇವಲ ಹೊರಗಿನ ಜಲಮೂಲಗಳಷ್ಟೇ ಅಲ್ಲದೆ, ಮನೆಯ ಒಳಗೂ ಪುಟ್ಟ ಮಕ್ಕಳು ಸಣ್ಣವಸ್ತುಗಳನ್ನು (ನಾಣ್ಯ, ಹೂವು, ಗುಂಡಿ, ಸಣ್ಣ ಆಟಿಕೆ) ನುಂಗದಂತೆ ಜಾಗ್ರತೆ ವಹಿಸಬೇಕು.
ಮಧ್ಯಾಹ್ನದ ಉರಿಬಿಸಿಲಿನಲ್ಲಿ ಮಕ್ಕಳನ್ನು ಹೊರಗೆ ಕಳುಹಿಸದೆ, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಕಾಳಜಿ ವಹಿಸಬೇಕು. ಪೋಷಕರ ಜಾಗರೂಕತೆಯೇ ಮಕ್ಕಳಿಗೆ ನಿಜವಾದ ರಕ್ಷಾಕವಚ, ಈ ರಜೆಯ ಸಂಭ್ರಮವು ಕೇವಲ ಸಿಹಿಯಾದ ನೆನಪಿನ ಬುತ್ತಿಯಾಗಲಿ; ಎಂದಿಗೂ ನೋವಿನ ಅಧ್ಯಾಯವಾಗದಿರಲಿ. -ಬಿ. ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…