ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲರೇ ತಿಳಿಸಬೇಕಿದೆ. ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲ ಒಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಇದರಿಂದಾಗಿ ಜನಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಸರ್ಕಾರ ಈ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಿದ್ದರೆ ಕೂಲಿ ಕಾರ್ಮಿಕರು, ನೌಕರರು, ಮಧ್ಯಮ ವರ್ಗದ ಜನರು ಜೀವನ ಸಾಗಿಸುವುದಾದರೂ ಹೇಗೆ? ಸರ್ಕಾರ ಬಡಜನರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ ಗ್ಯಾರಂಟಿ ಯೋಜನೆಗಳನ್ನು ನೀಡಿಯೂ ಫಲವೇನು? ಹೀಗೆ ಸರ್ಕಾರ ಬೆಲೆ ಏರಿಕೆಯ ನೀತಿಯನ್ನು ಮುಂದುವರಿಸುತ್ತಾ ಹೋದರೆ ಮುಂದೊಂದು ದಿನ ಜನ ತಾಳ್ಮೆಗೆಟ್ಟು ಸರ್ಕಾರದ ವಿರುದ್ಧ ದಂಗೆ ಏಳುವ ಪ್ರಸಂಗ ಬಂದರೂ ಆಶ್ಚರ್ಯಪಡಬೇಕಾಗಿಲ್ಲ.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…