ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ ಬಾರದೇ ತೀವ್ರ ತೊಂದರೆಯಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಬಸ್‌ಸೌಲಭ್ಯ ಕಲ್ಪಿಸುವ ಮೂಲಕ ಅನುಕೂಲ ಕಲ್ಪಿಸಬೇಕಾಗಿದೆ.
–ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.





