Mysore
30
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಒತ್ತಡದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಲಾಖೆಯ ಸಹಾಯವಾಣಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಅಂಕಗಳನ್ನೇ ಮಾನದಂಡವಾಗಿಸಿಕೊಂಡಿರುವ ಈ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಕುಗ್ಗಿಸುತ್ತಿದೆ. ಕೇವಲ ಪರೀಕ್ಷೆಗಳನ್ನು ನಡೆಸುವುದರಲ್ಲಿ ಮಗ್ನವಾಗಿರುವ ಸರ್ಕಾರ ಪ್ರತಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಪ್ತ ಸಮಾಲೋಚನೆ ಕೇಂದ್ರಗಳನ್ನು ಸ್ಥಾಪಿಸಲಿ. ವಿದ್ಯಾರ್ಥಿಗಳ ಜೀವಕ್ಕಿಂತ ಅಂಕಪಟ್ಟಿ ಮುಖ್ಯವಲ್ಲ ಎಂಬ ಕನಿಷ್ಠ ಜ್ಞಾನವಿಲ್ಲದ ಇಲಾಖೆಯ ಮೌನವು ಈ ಶೈಕ್ಷಣಿಕ ಕೊಲೆಗಳಿಗೆ ನೇರ ಹೊಣೆಯಾಗಿದೆ. ಕೂಡಲೇ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ ಆತ್ಮಹತ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳುವುದು ಅಗತ್ಯ.

– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು

 

Tags:
error: Content is protected !!