ಓದುಗರ ಪತ್ರ
ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಉದ್ಯಾನವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಪ್ರವೇಶ ಶುಲ್ಕ ಹಾಗೂ ವಾಹನಗಳ ಟೋಲ್ ಸಂಗ್ರಹವನ್ನು ನಗದು ರೂಪದಲ್ಲೇ ಪಾವತಿಸಬೇಕಾಗಿದ್ದು, ಡಿಜಿಟಲ್ ಪಾವತಿಗೆ ಅವಕಾಶವಿಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಅಲ್ಲಿನ ಸಿಬ್ಬಂದಿಯನ್ನು ವಿಚಾರಿಸಿದರೆ ಸರ್ವರ್ ಸರಿಯಿಲ್ಲ. ನಗದು ರೂಪದಲ್ಲಿ ಪಾವತಿಸಿ, ಇಲ್ಲದಿದ್ದರೆ ವಾಪಸ್ ಹೋಗಿ ಎಂದು ಉಡಾ-ಯಿಂದ ಉತ್ತರಿಸುತ್ತಾರೆ.
ಕೇಂದ್ರ ಸರ್ಕಾರ ಡಿಜಿಟಲ್ ಪಾವತಿಗೆ ಉತ್ತೇಜನ ನೀಡಿದ್ದು, ನಗದು ರಹಿತ ವ್ಯವಹಾರವನ್ನು ಜಾರಿಗೊಳಿಸಿರುವ ಈ ದಿನಗಳಲ್ಲೂ ಕೆಆರ್‌ಎಸ್ನಲ್ಲಿ ಡಿಟಿಟಲ್ ಪಾವತಿಗೆ ಅವಕಾಶ ಕಲ್ಪಿಸದೇ ಇರುವುದು ಸರಿಯಲ್ಲ. ಸಂಬಂಧಪಟ್ಟವರು ಕೂಡಲೇ ಕೆಆರ್‌ಎಸ್‌ನಲ್ಲಿ ಡಿಜಿಟಲ್ ಪಾವತಿಗೆ ಅವಕಾಶ ಕಲ್ಪಿಸುವ ಮೂಲಕ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.
– ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…
ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ…