ಐಐಟಿ, ಐಐಎಂ, ಐಐಎಸ್‌ಪಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ೧ ಲಕ್ಷ ರೂ. ನಿಂದ ೨ ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದೊಂದು ಒಳ್ಳೆಯ ಬೆಳವಣಿಗೆ.
ಇದರೊಂದಿಗೆ ವೈದ್ಯಕೀಯ ವ್ಯಾಸಂಗ ಮಾಡುವ ಪರಿಶಿಷ್ಟ ಸಮುದಾಯಗಳ ವಿದ್ಯಾರ್ಥಿಗಳಿಗೆ ೨೫ ಲಕ್ಷ ರೂ. ವಿದ್ಯಾರ್ಥಿ ವೇತನ ನೀಡುವುದಾಗಿಯೂ ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಈ ನಿಲುವಿನಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬು ದರಲ್ಲಿ ಎರಡು ಮಾತಿಲ್ಲ. ಆದರೆ ಇಂತಹ ಸೌಲಭ್ಯಗಳು ಎಲ್ಲ ಸಮುದಾಯಗಳಲ್ಲಿನ ಬಡ ವಿದ್ಯಾರ್ಥಿಗಳಿಗೂ ದೊರತರೆ ಅವರೂ ಉನ್ನತ ವ್ಯಾಸಂಗ ಮಾಡಲು ಸಹಾಯವಾಗಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಯೋಚಿಸಿ ಎಲ್ಲ ಸಮುದಾಯಗಳ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನ ಸೌಲಭ್ಯ ನೀಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.