ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ದೂರದ ಜಿಲ್ಲೆಗಳಿಗೆ ಅಭ್ಯರ್ಥಿಗಳು ಬರಬೇಕಾಗಿದೆ. ಕೆಲ ಅಭ್ಯರ್ಥಿಗಳು ಪರೀಕ್ಷಾ ಹಿಂದಿನ ದಿನವೇ ಆಗಮಿಸಿ ವಾಸ್ತವ್ಯ ಹೂಡಿರುತ್ತಾರೆ. ಇದರಿಂದಾಗಿ ಅವರಿಗೆ ಆರ್ಥಿಕವಾಗಿಯೂ ಹೊರೆಯಾಗಿರುತ್ತದೆ.
ಇದರ ನಡುವೆ ಸರಿಯಾದ ಸಮಯಕ್ಕೆ ಬಸ್ ಸಿಗದೆ ಕೆಲ ಅಭ್ಯರ್ಥಿಗಳು ತಡವಾಗಿ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯಲಾಗದೆ ವಾಪಸಾಗಿರುವ ಉದಾಹರಣೆಗಳಿವೆ. ಆದ್ದರಿಂದ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸುವ ಜತೆಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅಭ್ಯರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ.