Mysore
28
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಓದುಗರ ಪತ್ರ: ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿ

dgp murder case

ಗ್ರಾಮಗಳಲ್ಲಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಈ ಆಸ್ಪತ್ರೆಗಳ ಪೈಕಿ ಕೆಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಇನ್ನೂ ಕೆಲವು ಕಡೆ ವೈದ್ಯರೇ ಇಲ್ಲದೆ ಅವು ಸಾರ್ವಜನಿಕ ಸೇವೆಯಿಂದ ದೂರಾಗಿವೆ. ಗ್ರಾಮೀಣ ಭಾಗದಲ್ಲಿ ಬಡವರ್ಗದ ಜನರು ಹೆಚ್ಚಾಗಿದ್ದು, ಕೃಷಿ, ಕೂಲಿ,ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಅಂತಹವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಆದರೆ ಇಲ್ಲಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದ ಪರಿಣಾಮ ಗುಣಮಟ್ಟದ ಚಿಕಿತ್ಸೆ ಸಿಗದೆ ಜನರು ಖಾಸಗಿ ಆಸ್ಪತ್ರೆಗಳ ಮೊರೆಹೋಗುವಂತಾಗಿದೆ. ಅಲ್ಲದೆ ಕೆಲ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪವೂ ಇದೆ.

ಇನ್ನು ತುರ್ತು ಸಂದರ್ಭಗಳಲ್ಲಿ ಇಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳೂ ದೊರಕುವುದಿಲ್ಲ. ಅಪಘಾತ, ಹೆರಿಗೆ, ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಇಲ್ಲಿನ ವೈದ್ಯರು ದೊಡ್ಡ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಾರೆಯೇ ವಿನಾ ಇಲ್ಲಿಯೇ ಚಿಕಿತ್ಸೆ ನೀಡಲು ಅವರ ಬಳಿ ಯಾವುದೇ ಸೌಲಭ್ಯಗಳಿಲ್ಲ. ಇನ್ನು ಸ್ಕಾ ನಿಂಗ್ ಸೌಲಭ್ಯವಂತೂ ಅಲಭ್ಯವಾಗಿದ್ದು, ಬಡವರ್ಗದ ಜನರು ಹೆಚ್ಚು ಹಣ ಪಾವತಿಸಿ ಖಾಸಗಿ ಸ್ಕಾ ನಿಂಗ್ ಸೆಂಟರ್‌ಗಳ ಮೊರೆ ಹೋಗಬೇಕಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಕಲ ಸೌಲಭ್ಯಗಳನ್ನು ಒದಗಿಸುವ ಜತೆಗೆ, ಸ್ಕಾ ನಿಂಗ್ ಯಂತ್ರೋಪಕರಣಗಳನ್ನೂ ಅಳವಡಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!