ಓದುಗರ ಪತ್ರ
ಗ್ರಾಮಗಳಲ್ಲಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಈ ಆಸ್ಪತ್ರೆಗಳ ಪೈಕಿ ಕೆಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಇನ್ನೂ ಕೆಲವು ಕಡೆ ವೈದ್ಯರೇ ಇಲ್ಲದೆ ಅವು ಸಾರ್ವಜನಿಕ ಸೇವೆಯಿಂದ ದೂರಾಗಿವೆ. ಗ್ರಾಮೀಣ ಭಾಗದಲ್ಲಿ ಬಡವರ್ಗದ ಜನರು ಹೆಚ್ಚಾಗಿದ್ದು, ಕೃಷಿ, ಕೂಲಿ,ನಾಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ.
ಅಂತಹವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಗ್ರಾಮೀಣ ಭಾಗದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಆದರೆ ಇಲ್ಲಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದ ಪರಿಣಾಮ ಗುಣಮಟ್ಟದ ಚಿಕಿತ್ಸೆ ಸಿಗದೆ ಜನರು ಖಾಸಗಿ ಆಸ್ಪತ್ರೆಗಳ ಮೊರೆಹೋಗುವಂತಾಗಿದೆ. ಅಲ್ಲದೆ ಕೆಲ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪವೂ ಇದೆ.
ಇನ್ನು ತುರ್ತು ಸಂದರ್ಭಗಳಲ್ಲಿ ಇಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳೂ ದೊರಕುವುದಿಲ್ಲ. ಅಪಘಾತ, ಹೆರಿಗೆ, ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಇಲ್ಲಿನ ವೈದ್ಯರು ದೊಡ್ಡ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಾರೆಯೇ ವಿನಾ ಇಲ್ಲಿಯೇ ಚಿಕಿತ್ಸೆ ನೀಡಲು ಅವರ ಬಳಿ ಯಾವುದೇ ಸೌಲಭ್ಯಗಳಿಲ್ಲ. ಇನ್ನು ಸ್ಕಾ ನಿಂಗ್ ಸೌಲಭ್ಯವಂತೂ ಅಲಭ್ಯವಾಗಿದ್ದು, ಬಡವರ್ಗದ ಜನರು ಹೆಚ್ಚು ಹಣ ಪಾವತಿಸಿ ಖಾಸಗಿ ಸ್ಕಾ ನಿಂಗ್ ಸೆಂಟರ್‌ಗಳ ಮೊರೆ ಹೋಗಬೇಕಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಕಲ ಸೌಲಭ್ಯಗಳನ್ನು ಒದಗಿಸುವ ಜತೆಗೆ, ಸ್ಕಾ ನಿಂಗ್ ಯಂತ್ರೋಪಕರಣಗಳನ್ನೂ ಅಳವಡಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…