ಓದುಗರ ಪತ್ರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು ಐದು ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲು ಸರ್ಕಾರ ಮುಂದಾಗಿದೆ ಎಂಬುದಾಗಿ ವರದಿಯಾಗಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರರನ್ನು ನೇಮಿಸಿ ಕೊಳ್ಳುವುದು ಇಂದು ನಿನ್ನೆಯ ಬೆಳವಣಿಯಲ್ಲ. ಕಳೆದ 3-4 ದಶಕ ಗಳಿಂದಲೂ ಅರೆಕಾಲಿಕ, ತಾತ್ಕಾಲಿಕ ಹಾಗೂ ಅತಿಥಿ ಉಪನ್ಯಾಸಕ ಎಂದು ವಿವಿಧ ಹೆಸರುಗಳಲ್ಲಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
ಖಾಯಂ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗದಿದ್ದಾಗ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಾ ಬಂದಿದೆ. ಹೀಗೆ ಅನೇಕ ವರ್ಷಗಳಿಂದ ಕಡಿಮೆ ಗೌರವಧನಕ್ಕೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರನ್ನು ಈಗ ಏಕಾಏಕಿ ಕೆಲಸದಿಂದ ವಜಾ ಮಾಡುತ್ತೇವೆ ಎಂದರೆ ಆ ಉಪನ್ಯಾಸಕರ ಬದುಕು ಏನಾಗಬೇಡ? ಸರ್ಕಾರ ಯಾವುದೇ ಸೌಲಭ್ಯಗಳನ್ನೂ ನೀಡದೆ, ಹುದ್ದೆಗೆ ಭದ್ರತೆಯನ್ನೂ ನೀಡದೆ ಹತ್ತಾರು ವರ್ಷಗಳ ಕಾಲ ದುಡಿಸಿಕೊಂಡು ಈಗ ಏಕಾಏಕಿ ಕೆಲಸದಿಂದ ತೆಗೆದುಹಾಕುವುದು ನ್ಯಾಯವೇ? ಸರ್ಕಾರ ಈ ಬಗ್ಗೆ ಚಿಂತಿಸಿ ಮೊದಲು ಅತಿಥಿ ಉಪನ್ಯಾಸಕರಿಗೆ ಕೆಲಸದ ಭದ್ರತೆ ಒದಗಿಸಲಿ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…
ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…
ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…