ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ ಬಿಸಿ ಊಟಕ್ಕೆ ತರಕಾರಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ತಂದು ಜವಾಬ್ದಾರಿ ನಿರ್ವಹಿಸುವುದು, ಬಿಸಿಊಟಕ್ಕೆ ಮಕ್ಕಳ ಹಾಜರಾತಿಯನ್ನು ಆನ್‌ಲೈನಲ್ಲಿ ಹಾಕುವುದು, ಎಲ್‌ಬಿಎ, ಎಫ್‌ಎಲ್‌ಎನ್, ಓದು ಕರ್ನಾಟಕ, ಮರು ಸಿಂಚನ, ಮಕ್ಕಳ ಸ್ಯಾಟ್ಸ್ ನಿರ್ವಹಣೆ, ಯುಡೈಸ್ ಪ್ಲಸ್, ವಿದ್ಯಾವಾಹಿನಿ, ಇಕೋಕ್ಲಬ್ ದಾಖಲಿಕರಣ, ಶಿಕ್ಷಕರ ಆನ್‌ಲೈನ್ ಮೀಟಿಂಗ್ ಹಾಗೂ ತರಬೇತಿ….
ಇವೇ ಮೊದಲಾದ ಕಾರ್ಯಕ್ರಮಗಳನ್ನೂ ಪ್ರತಿದಿನ ಬೋಧನೆಯ ಬಿಡುವಿನ ವೇಳೆಯಲ್ಲಿ ತಮ್ಮ ಮೊಬೈಲ್ ನಲ್ಲಿಯೇ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇದು ಕಷ್ಟ ಸಾಧ್ಯವಾಗಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ.
ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಕಾಡುತ್ತಿದ್ದು, ಸಿಗ್ನಲ್ ಗಳು ಆಗಾಗ ಕೈಕೊಡುವುದರಿಂದ ಶಿಕ್ಷಕರು ಆಯಾ ದಿನದ ಕೆಲಸ ಕಾರ್ಯಗಳನ್ನು ಆನ್ ಲೈನ್‌ನಲ್ಲಿ ಅಂದೇ ಮುಗಿಸಬೇಕಾದ ಒತ್ತಡದಲ್ಲಿರುತ್ತಾರೆ. ಅಲ್ಲದೆ ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇ-ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಹೀಗಾಗಿ ಇವೆಲ್ಲ ಕೆಲಸ ಕಾರ್ಯಗಳನ್ನು ಶಿಕ್ಷಕರು ಬೋಧನೆಯ ನಡುವೆ ತಮ್ಮ ಮೊಬೈಲ್ ನಲ್ಲಿಯೇ ಮಾಡಲು ಕಾಲಹರಣವಾಗುತ್ತಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸಂಪರ್ಕ ಕಲ್ಪಿಸಿಕೊಟ್ಟರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ದಾಖಲೀಕರಣ ಸುಗಮವಾಗಿ ನಡೆಯಲು ನೆರವಾದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…