ಓದುಗರ ಪತ್ರ

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ ಬಿಸಿ ಊಟಕ್ಕೆ ತರಕಾರಿ, ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ತಂದು ಜವಾಬ್ದಾರಿ ನಿರ್ವಹಿಸುವುದು, ಬಿಸಿಊಟಕ್ಕೆ ಮಕ್ಕಳ ಹಾಜರಾತಿಯನ್ನು ಆನ್‌ಲೈನಲ್ಲಿ ಹಾಕುವುದು, ಎಲ್‌ಬಿಎ, ಎಫ್‌ಎಲ್‌ಎನ್‌, ಓದು ಕರ್ನಾಟಕ, ಮರು ಸಿಂಚನ, ಮಕ್ಕಳ ಸ್ಯಾಟ್ಸ್ ನಿರ್ವಹಣೆ, ಯುಡೈಸ್ ಪ್ಲಸ್, ವಿದ್ಯಾವಾಹಿನಿ, ಇಕೋಕ್ಲಬ್ ದಾಖಲಿಕರಣ, ಶಿಕ್ಷಕರ ಆನ್‌ಲೈನ್‌ ಮೀಟಿಂಗ್ ಹಾಗೂ ತರಬೇತಿ….

ಇವೇ ಮೊದಲಾದ ಕಾರ್ಯಕ್ರಮಗಳನ್ನೂ ಪ್ರತಿದಿನ ಬೋಧನೆಯ ಬಿಡುವಿನ ವೇಳೆಯಲ್ಲಿ ತಮ್ಮ ಮೊಬೈಲ್ ನಲ್ಲಿಯೇ ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಇದು ಕಷ್ಟ ಸಾಧ್ಯವಾಗಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್ ಟಾಪ್ ಹಾಗೂ ವೈಫೈ ಸೌಲಭ್ಯ ಕಲ್ಪಿಸುವ ಅವಶ್ಯಕತೆ ಇದೆ.

ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತುಂಬಾ ಕಾಡುತ್ತಿದ್ದು, ಸಿಗ್ನಲ್ ಗಳು ಆಗಾಗ ಕೈಕೊಡುವುದರಿಂದ ಶಿಕ್ಷಕರು ಆಯಾ ದಿನದ ಕೆಲಸ ಕಾರ್ಯಗಳನ್ನು ಆನ್ ಲೈನ್‌ನಲ್ಲಿ ಅಂದೇ ಮುಗಿಸಬೇಕಾದ ಒತ್ತಡದಲ್ಲಿರುತ್ತಾರೆ. ಅಲ್ಲದೆ ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026-27ನೇ ಸಾಲಿನಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಇ-ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಹೀಗಾಗಿ ಇವೆಲ್ಲ ಕೆಲಸ ಕಾರ್ಯಗಳನ್ನು ಶಿಕ್ಷಕರು ಬೋಧನೆಯ ನಡುವೆ ತಮ್ಮ ಮೊಬೈಲ್ ನಲ್ಲಿಯೇ ಮಾಡಲು ಕಾಲಹರಣವಾಗುತ್ತಿರುವುದರಿಂದ ಪ್ರತಿಯೊಂದು ಶಾಲೆಗೂ ಸರ್ಕಾರ ಲ್ಯಾಪ್‌ ಟಾಪ್ ಹಾಗೂ ವೈಫೈ ಸಂಪರ್ಕ ಕಲ್ಪಿಸಿಕೊಟ್ಟರೆ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ದಾಖಲೀಕರಣ ಸುಗಮವಾಗಿ ನಡೆಯಲು ನೆರವಾದಂತಾಗುತ್ತದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago