ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ ಜೋರಾಗಿ ನಡೆಯುತ್ತದೆ.
ಪ್ರತಿನಿತ್ಯ ಇಲ್ಲಿಗೆ ವ್ಯಾಪಾರ ನಿಮಿತ್ತ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿದ್ದ ಸಾರ್ವಜನಿಕ ಶೌಚಾಲಯವನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ಶೌಚಕ್ಕೆ ತೆರಳಲು ತೀವ್ರ ತೊಂದರೆಯಾಗಿದೆ. ಶೌಚಾಲಯ ನಿರ್ವಹಣೆಯು ಎಚ್. ಡಿ. ಕೋಟೆ ಪುರಸಭೆ ವ್ಯಾಪ್ತಿಗೆ ಬರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯವನ್ನು ದುರಸ್ತಿ ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾಲ್ಲೂಕು





