ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗೆ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. ಗಳನ್ನು ದರೋಡೆ ಮಾಡಲಾಗಿದೆ. ಅಲ್ಲದೆ ಮಂಗಳೂರಿನಲ್ಲಿ ಕೋಟೆಕಾರು ಸಹಕಾರ ಬ್ಯಾಂಕ್ ದರೋಡೆ ಮಾಡಿ ಲಕ್ಷಾಂತರ ರೂ. ಮೌಲ್ಯದ ಒಡವೆ ದೋಚಲಾಗಿದೆ.
ಇವುಗಳೊಂದಿಗೆ ಅಮಾನವೀಯ ಕೃತ್ಯಗಳೂ ಹೆಚ್ಚಾಗುತ್ತಿದ್ದು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಕ್ರೌರ್ಯ ಮೆರೆದಿದ್ದರೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಿಂಸಿಸಲಾಗಿದೆ. ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ದರೋಡೆ ಪ್ರಕರಣ ಈಗ ಮೈಸೂರಿನಲ್ಲಿಯೂ ದಾಖಲಾಗಿದ್ದು, ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಕೇರಳ ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿದ ಐವರು ಮುಸುಕುಧಾರಿಗಳು ಕಾರನ್ನು ಅಪಹರಿಸಿದಲ್ಲದೆ ೧. ೫೦ ಲಕ್ಷ ರೂ. ಗಳನ್ನು ದೋಚಿದ್ದಾರೆ. ಇವುಗಳೊಂದಿಗೆ ಮಂಡ್ಯ, ಮೈಸೂರು, ಹುಣಸೂರಿನಲ್ಲಿ ಎಟಿಎಂ ದರೋಡೆಗಳು ಹೆಚ್ಚಾಗುತ್ತಿದ್ದು, ಜನರು ಓಡಾಡಲು ಆತಂಕಪಡುವಂತಾಗಿದೆ. ಇಂತಹ ಅಪರಾಧಿಕ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದ್ದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…