ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ.
ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುವ ಬುಕ್ಕಿಗಳು ಕಾಲೇಜು ವಿದ್ಯಾರ್ಥಿಗಳು, ಹೋಟೆಲ್, ಮಾಲ್, ವಿವಿಧ ಶೋ ರೂಮ್‌ಗಳಲ್ಲಿ ಕೆಲಸ ಮಾಡುವ ಯುವಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬೆಟ್ಟಿಂಗ್ ಭೂತ ಹಳ್ಳಿಗಳಿಗೂ ಕಾಲಿಟ್ಟಿರುವುದು ದುರಂತವೇ ಸರಿ. ಹಲವು ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡಿಕೊಂಡು ಬಳಿಕ ಬುಕ್ಕಿಗಳಿಂದ ಮೋಸಹೋಗಿ ಹಣ ಕಳೆದುಕೊಳ್ಳುವ ಜತೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆಯ ಹಾದಿ ಹಿಡಿದ ನೂರಾರು ಉದಾಹರಣೆಗಳಿವೆ.
ಬೆಟ್ಟಿಂಗ್ ದಂಧೆ ಫೋನ್ ಮೂಲಕವೇ ನಡೆಯುತ್ತಿದ್ದರೂ ಸೈಬರ್ ಕ್ರೈಂ ವಿಭಾಗದ ಪೊಲೀಸರು ಇದಕ್ಕೆ ಕಡಿವಾಣ ಹಾಕಲು ಮುಂದಾಗದಿರುವುದು ಬೇಸರದ ಸಂಗತಿ. ಪೊಲೀಸ್ ಇಲಾಖೆ ಈ ಬಾರಿಯಾದರೂ ಎಚ್ಚೆತ್ತುಕೊಂಡು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕು. -ಎಚ್.ಕೆ.ರಂಜಿತ, ಹಾಸನ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…