Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಓದುಗರ ಪತ್ರ | ಉಪನ್ಯಾಸಕರನ್ನು ನೇಮಕ ಮಾಡಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದೇಶ ವಿದೇಶಗಳಿಂದ ನೂರಾರು ವಿದ್ಯಾರ್ಥಿಗಳು ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಚೈನಿಸ್, ಫ್ರೆಂಚ್, ಜರ್ಮನ್, ಇಟಾಲಿಯನ್, ಜಪಾನೀಸ್ ಮತ್ತು ರಷ್ಯನ್ ಭಾಷೆಗಳನ್ನು ಅಧ್ಯಯನ ಮಾಡಲು ಅವಕಾಶವಿದೆ.

ಆದರೆ, ಕೆಲ ವರ್ಷಗಳಿಂದ ಚೈನೀಸ್ ಮತ್ತು ರಷ್ಯನ್ ಭಾಷೆಗಳನ್ನು ಹೊರತುಪಡಿಸಿದರೆ ಉಳಿದ ಭಾಷೆಗಳ ಅಧ್ಯಯನ ವಿಭಾಗಗಳಲ್ಲಿ ಉಪನ್ಯಾಸಕರಿಲ್ಲದೆ ತರಗತಿಗಳೇ ನಡೆಯುತ್ತಿಲ್ಲ. ನಾನೂ ಕೂಡ ಒಂದು ವರ್ಷದಿಂದ ಫ್ರೆಂಚ್ ಅಧ್ಯಯನ ಕೇಂದ್ರಕ್ಕೆ ಸೇರಿ ಆ ಭಾಷೆ ಕಲಿಯುವ ಆಸಕ್ತಿ ತೋರಿದ್ದರೂ ಆ ವಿಭಾಗದಲ್ಲಿ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯುತ್ತಿಲ್ಲ. ಇಲ್ಲಿನ ಸಾಕಷ್ಟು ವಿದ್ಯಾರ್ಥಿಗಳು ಓಪನ್ ಎಲೆಕ್ಟಿವ್ ವಿಷಯದ ಆಯ್ಕೆಯಲ್ಲಿ ವಿದೇಶಿ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡುತ್ತಾರೆ. ಆದರೆ ಉಪನ್ಯಾಸಕರಿಲ್ಲದಿರುವುದರಿಂದ ಆ ವಿದ್ಯಾರ್ಥಿಗಳಿಗೆ ಈ ಭಾಷೆಗಳನ್ನು ಅಧ್ಯಯನ ಮಾಡುವ ಅವಕಾಶ ಕೈತಪ್ಪುವಂತಾಗಿದೆ. ಆದ್ದರಿಂದ ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿದೇಶಿ ಭಾಷೆಗಳ ಅಧ್ಯಯನ ವಿಭಾಗಗಳಿಗೆ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!