ಓದುಗರ ಪತ್ರ

ಓದುಗರ ಪತ್ರ | ಮೆಟ್ರೋ ಪ್ರಯಾಣ ದರ ತಗ್ಗಿಸಿ

ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. ಬೆಂಗಳೂರಿನಲ್ಲಿ ಕೇವಲ ೧೦ ಕಿ. ಮೀ. ಕ್ರಮಿಸಲು ಗಂಟೆಗಟ್ಟಲೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಹುತೇಕ ಮಂದಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಬಿಎಂಟಿಸಿ ಬಸ್‌ಗಳ ಜತೆಗೆ ಹೆಚ್ಚಾಗಿ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ಜನರ ಈ ಅವಲಂಬನೆಯನ್ನೇ ಬಂಡವಾಳ ಮಾಡಿಕೊಂಡಿರುವ ಸರ್ಕಾರ ಜನರೊಂದಿಗೆ ಜಿದ್ದಿಗೆ ಬಿದ್ದಂತೆ ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಹಗಲು ದರೋಡೆಗೆ ಮುಂದಾಗಿದೆ. ಈಗಾಗಲೇ ಬಸ್ ಪ್ರಯಾಣ ದರದ ಏರಿಕೆಯಿಂದಾಗಿ ಜನರು ತತ್ತರಿಸುತ್ತಿರುವಾಗಲೇ ಮೆಟ್ರೋ ದರವನ್ನೂ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಏಕಾಏಕಿ ಬೆಲೆಯನ್ನು ದುಪ್ಪಟ್ಟು ಏರಿಸುತ್ತಾ ಹೋದರೆ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದಾದರೂ ಹೇಗೆ? ಸರ್ಕಾರ ತನ್ನ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಅನಗತ್ಯವಾಗಿ ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಸುವ ಬದಲು ಬಿಎಂಆರ್‌ಸಿಎಲ್‌ನ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಿ. –ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

45 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

47 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

49 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

52 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

57 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago