Mysore
14
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಓದುಗರ ಪತ್ರ: ದಟ್ಟಗಳ್ಳಿ ರಸ್ತೆ ದುರಸ್ತಿ ಮಾಡಿ

ಓದುಗರ ಪತ್ರ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಜೋಡಿ ಬೇವಿನ ಮರದ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ವಾಹನಚಾಲಕರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಡಾವಣೆಯು ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಕೂಡಲೇ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

ಸ್ಥಳೀಯ ನಿವಾಸಿಗಳು, ದಟ್ಟಗಳ್ಳಿ, ಮೈಸೂರು

Tags:
error: Content is protected !!