ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.
ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.
ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.
-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…