ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಹಿತೇಶ್ ಪಿ. ನಾಗ್, ಮೈಸೂರು





