Mysore
20
overcast clouds
Light
Dark

ಓದುಗರ ಪತ್ರ| ಪರಿಶಿಷ್ಟ ಸಮುದಾಯಗಳ ಮೀಸಲು ಹಣ ಗ್ಯಾರಂಟಿಗಳಿಗೆ ಬಳಕೆಯಾಗದಿರಲಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಬಳಸಿಕೊಂಡಿರುವುದು ಖಂಡನೀಯ.

ಸಮಾಜದಲ್ಲಿ ಶೋಷಣೆಗೆ ಒಳಗಾದ ಸಮುದಾ ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿ ಟಿದ್ದು, ಆ ಸಮುದಾಯಗಳಿಗೆ ಈ ಹಣ ಬಳಕೆಯಾ ಗಬೇಕು. ಆದರೆ, ಈ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯ ಗಳಿಗೆ ಅನ್ಯಾಯ ಮಾಡಿದಂತಾಗಿದೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾತಿ, ಪ.ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ ಈಗ ಅದನ್ನೂ ಶೇ.75ರಷ್ಟು ಅಂಕಗಳಿಗೆ ನಿಗದಿ ಮಾಡಲಾಗಿದೆ. ಇದರಿಂದಾಗಿ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸರ್ಕಾರ ಇಂಥ ದಲಿತ ವಿರೋಧಿ ನೀತಿಗಳನ್ನು ಕೈಬಿಟ್ಟು ಪ.ಜಾತಿ, ಪ.ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಆಯಾ ಸಮುದಾಯಗಳ ಅಭಿವೃದ್ಧಿಗೆ ಮಾತ್ರ ಬಳಸಬೇಕಿದೆ.

-ಎಂ.ಪಿ.ದರ್ಶನ್ ಚಂದ್ರ, ಮಾನಸಗಂಗೋತ್ರಿ, ಮೈಸೂರು.