ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯವಸ್ತುಗಳ ದರ ಏರಿಕೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ.
ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ರಾಜ್ಯ ಸರ್ಕಾರವು, ಮೆಟ್ರೋ ಪ್ರಯಾಣ ದರ, ಹಾಲು, ಮೊಸರು, ಅಬಕಾರಿ ಸುಂಕಗಳನ್ನು ಹಂತ ಹಂತ ವಾಗಿ ಏರಿಕೆ ಮಾಡಿತ್ತು. ಇತ್ತ ಕೇಂದ್ರ ಪ್ರತಿ ಎಲ್‌ಪಿಜಿ ಸಿಲಿಂಡರ್ ಬೆಲೆ ಯನ್ನು ೫೦ ರೂ. ಏರಿಕೆ ಮಾಡಿ, ಬಡ ಮತ್ತು ಮಧ್ಯಮ ವರ್ಗದ ಜನ ರನ್ನು ಶೋಷಣೆ ಮಾಡಲು ಮುಂದಾಗಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿನನಿತ್ಯ ಬಳಕೆ ಮಾಡುವ ವಸ್ತುಗಳ ದರ ವನ್ನು ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡ ಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು




