ಓದುಗರ ಪತ್ರ

ಓದುಗರ ಪತ್ರ | ಬಸ್‌ಗಳಲ್ಲಿ ಜನಪ್ರತಿನಿಧಿಗಳಿಗೆ ಆಸನ ಮೀಸಲು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು ವಿಚಾರವೆಂದರೆ ಜನಪ್ರತಿನಿಧಿಗಳಿಗೆ ಆಸನವನ್ನು ಮೀಸಲಿರಿಸಿರುವುದು.

ಸಾಮಾನ್ಯವಾಗಿ ವೇಗದೂತ ಬಸ್‌ಗಳಲ್ಲಿ ಶಾಸಕರು, ಸಂಸದರಿಗೆ ಆಸನಗಳನ್ನು ಮೀಸಲಿರಿಸಲಾಗಿರುತ್ತದೆ. ಹಿಂದೆ ಶಾಸಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದುದ್ದನ್ನು ನೋಡಿದ್ದೇವೆ. ಆದರೆ, ಈಗ ಶಾಸಕರು, ಸಂಸದರು ಬಸ್‌ನಲ್ಲಿ ಪ್ರಯಾಣಿಸುವ ಮಾತು ಬಹಳ ದೂರವಾಗಿದೆ. ಒಂದು ವೇಳೆ ಹಾಗೆ ಪ್ರಯಾಣಿಸಿದರೆ ಅದು ಪತ್ರಿಕೆಗಳಿಗೆ ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗೆ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿಬಿಡಬಹುದು. ಇದು ಕೆಎಸ್‌ಆರ್‌ಟಿಸಿ ಅವರಿಗೂ ಗೊತ್ತಿದೆ. ಹಾಗಿದ್ದರೂ ಕಿಟಕಿ ಮೇಲೆ ಶಾಸಕರು, ಸಂಸದರು ಎಂಬ ಬರಹ ನೋಡಿದರೆ, ಅದು ಕಿಸಕ್ಕನೆ ನಕ್ಕು ಅಣಕಿಸಿದಂತಾಗುತ್ತದೆ. ಈಗಲಾದೂ ಇಂತಹ ಬರಹಗಳನ್ನು ಕೊನೆಗಾಣಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕ್ರಮವಹಿಸಬೇಕು.

-ಎ. ಆರ್ನವ್, ಸರಸ್ವತಿಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

1 hour ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

2 hours ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

2 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

3 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

3 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

3 hours ago