ಓದುಗರ ಪತ್ರ
ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ‘ದೇವರಾಜ ಅರಸು ಸಿಟಿ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣವಾಗಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾರಣಕರ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಎಸ್.ಎಂ. ಕೃಷ್ಣರವರು ಬೆಂಗಳೂರಿಗೆ ಐ.ಟಿ., ಬಿ.ಟಿ. ಕಂಪೆನಿಗಳನ್ನು ತಂದು ಲಕ್ಷಾಂತರ ಸಾಫ್ಟ್‌ವೇರ್ ಇಂಜಿನಿಯಗಳಿಗೆ ಉದ್ಯೋಗಗಳನ್ನು ಕಲ್ಪಿಸಿದ್ದಾರೆ. ಅವರು ಈ ಪ್ರಯತ್ನ ಮಾಡಿದ್ದರ ಪರಿಣಾಮವಾಗಿ ಇಂದು ಬೆಂಗಳೂರು ಇಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ. ಈ ಕೀರ್ತಿ ಎಸ್. ಎಂ.ಕೃಷ್ಣರವರಿಗೆ ಸಲ್ಲಬೇಕು. ಡಿ.ದೇವರಾಜ ಅರಸುರವರು ಈ ರಾಜ್ಯಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಮುಖ್ಯಮಂತ್ರಿ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಅನೇಕ ಜನಪರ ಕೆಲಸಗಳಿಂದ ಇಂದಿಗೂ ಜನರಿಗೆ ಅನುಕೂಲಗಳಾಗುತ್ತಿವೆ. ಅವರ ಹೆಸರನ್ನು ಬೇರೆ ನಗರಗಳಿಗೆ ಇಡುವುದು ಸೂಕ್ತ. ಆದರೆ ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಅವರ ಹೆಸರನ್ನು ಇಡುವುದೇ ಸೂಕ್ತ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…