Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಓದುಗರ ಪತ್ರ| ಬಾಲ್ಯ ವಿವಾಹಗಳಿಗೆ ಕಡಿವಾಣ ಬೀಳಲಿ

ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ ಹೆಣ್ಣುಮಕ್ಕಳನ್ನು ಬೇಗನೆ ಮದುವೆ
ಮಾಡಿಬಿಡುತ್ತಾರೆ.

ಕರ್ನಾಟಕದಲ್ಲಿ 8,348 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದರೆ, ಬೆಳಕಿಗೆ ಬಾರದ ಪ್ರಕರಣಗಳು ಇನ್ನೆಷ್ಟಿವೆಯೋ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವಿನ ಕೊರತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ಬಾಲ್ಯ ವಿವಾಹಗಳು ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೆಟ್ಟುಕೊಡುವ ಜತೆಗೆ ಅವರನ್ನು ಮಾನಸಿಕವಾಗಿಯೂ, ದೈಹಿಕವಾಗಿಯೂ
ದುರ್ಬಲಗೊಳಿಸುತ್ತವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಈ ಸಾಮಾಜಿಕ ಪಿಡುಗಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಬೇಕಿದೆ.

-ಹೊ.ನಂ.ಅಂಕರಾಜು, ಮೈಸೂರು.

Tags:
error: Content is protected !!