ಆಹಾರ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಕವರ್‌ಗಳನ್ನು ಬಳಕೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದ್ದು, ಕರ್ನಾಟಕ ಸರ್ಕಾರ ಆಹಾರ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಆದೇಶಿಸಿದೆ.
ಆದರೂ ಕೆಲವು ಹೋಟೆಲ್ ಹಾಗೂ ಬೇಕರಿಗಳಲ್ಲಿ ಇಂದಿಗೂ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಕ್ಯಾನ್ಸರ್‌ಕಾರಕ ಎಂಬುದು ಗೊತ್ತಿದ್ದರೂ ಕೆಲವರು ಬಳಕೆ ಮಾಡುತ್ತಿರುವುದು ಖಂಡನೀಯ.
ಇನ್ನು ಕೆಲ ಭಾಗಗಳಲ್ಲಿ ಬಳಕೆಯಾದ ನಂತರ ಪ್ಲಾಸ್ಟಿಕ್ ಕವರ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಪ್ಲಾಸ್ಟಿಕ್ ಇತರೆ ವಸ್ತುಗಳಂತೆ ಕೊಳೆಯುವುದಿಲ್ಲವಾದ್ದರಿಂದ ಇದು ಪ್ರಾಣಿಗಳ ದೇಹ ಸೇರಿ ಅವುಗಳಿಗೂ ಕಂಟಕವಾಗುತ್ತಿದೆ. ಪ್ಲಾಸ್ಟಿಕ್ ಕವರ್‌ಗಳನ್ನು ಸರ್ಕಾರ ನಿಷೇಧಿಸಿದ್ದರೂ ಕೆಲವರು ಬಳಕೆ ಮಾಡುತ್ತಿದ್ದು, ಅಂತಹವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.





