ಓದುಗರ ಪತ್ರ

ಓದುಗರ ಪತ್ರ | ಪ್ಲಾಸ್ಟಿಕ್ ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ

ಆಹಾರ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಕವರ್‌ಗಳನ್ನು ಬಳಕೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದ್ದು, ಕರ್ನಾಟಕ ಸರ್ಕಾರ ಆಹಾರ ತಯಾರಿಕೆಯ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಆದೇಶಿಸಿದೆ.

ಆದರೂ ಕೆಲವು ಹೋಟೆಲ್ ಹಾಗೂ ಬೇಕರಿಗಳಲ್ಲಿ ಇಂದಿಗೂ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಕ್ಯಾನ್ಸರ್‌ಕಾರಕ ಎಂಬುದು ಗೊತ್ತಿದ್ದರೂ ಕೆಲವರು ಬಳಕೆ ಮಾಡುತ್ತಿರುವುದು ಖಂಡನೀಯ.

ಇನ್ನು ಕೆಲ ಭಾಗಗಳಲ್ಲಿ ಬಳಕೆಯಾದ ನಂತರ ಪ್ಲಾಸ್ಟಿಕ್ ಕವರ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಪ್ಲಾಸ್ಟಿಕ್ ಇತರೆ ವಸ್ತುಗಳಂತೆ ಕೊಳೆಯುವುದಿಲ್ಲವಾದ್ದರಿಂದ ಇದು ಪ್ರಾಣಿಗಳ ದೇಹ ಸೇರಿ ಅವುಗಳಿಗೂ ಕಂಟಕವಾಗುತ್ತಿದೆ. ಪ್ಲಾಸ್ಟಿಕ್ ಕವರ್‌ಗಳನ್ನು ಸರ್ಕಾರ ನಿಷೇಧಿಸಿದ್ದರೂ ಕೆಲವರು ಬಳಕೆ ಮಾಡುತ್ತಿದ್ದು, ಅಂತಹವರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

4 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

4 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

4 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

4 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago