ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಡಿಎಂಕೆ ಪಕ್ಷದ ಈ ನಡೆಯನ್ನು ಖಂಡಿಸಿ ರುವ ಅಲ್ಲಿನ ರಾಜ್ಯಪಾಲರು ತಮ್ಮ ಸಾಂಪ್ರ ದಾಯಿಕ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿರುವುದರಿಂದ ಆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಳೆದ ವರ್ಷ ಕೂಡ ಅಲ್ಲಿನ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ವಿಧಾನಸಭೆಯಿಂದ ಹೊರ ನಡೆದಿದ್ದರು. ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಈ ಪ್ರಕರಣದಿಂದ ಮತ್ತಷ್ಟು ಉಲ್ಬಣಗೊಂಡಂತಾಗಿದೆ. ಸಾಮಾನ್ಯವಾಗಿ ಎಲ್ಲ ಸಭೆ- ಸಮಾರಂಭಗಳಲ್ಲೂ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶದ ಐಕ್ಯತೆ, ಅಖಂಡತೆ ಮತ್ತು ಸಾರ್ವಭೌಮತ್ವಕ್ಕೆ ಗೌರವ ನೀಡಿ, ನಮ್ಮ ದೇಶದ ಭವ್ಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಮರಿಸಲಾಗುತ್ತದೆ. ಎಲ್ಲ ರಾಜ್ಯಗಳ ವಿಧಾನಸಭಾ ಅಽವೇಶನಗಳಲ್ಲಿಯೂ ಈ ಸಂಪ್ರದಾಯವನ್ನು ಪಾಲಿಸುವುದು ರೂಢಿ. ಆದರೆ ತಮಿಳುನಾಡಿನ ವಿಧಾನಸಭೆಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿರುವುದು ಸಂವಿಧಾನ ಬಾಹಿರವಾಗಿದೆ. ಇದು ನಿಜಕ್ಕೂ ಖಂಡನೀಯ. –
ಕೆ. ವಿ. ವಾಸು, ವಿವೇಕಾನಂದನಗರ, ಮೈಸೂರು