ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಂಪೆನಿಗಳು ಬಹು ಮುಖ್ಯವಾಗಿ ಮಾವಿನ ಹಣ್ಣಿನ ರಸದ ಹೆಸರಿನಲ್ಲಿ ಮಾರಕ ರಾಸಾಯನಿಕಗಳನ್ನು ಜನರಿಗೆ ಕುಡಿಸುತ್ತಿವೆ . ಈ ಪಾನೀಯಗಳಲ್ಲಿ ಮಾವಿನ ಹಣ್ಣಿನ ಬದಲು ಟರ್ಟ್ರಾಜಿನ್ ನಂತಹ ಕೃತಕ ಬಣ್ಣ ಹಾಗೂ ಹೈ ಫ್ರಕ್ಟೋಸ್ ಕಾರ್ನ್ ಸಿರಪ್ ಬಳಸಲಾಗುತ್ತಿದೆ. ಇದು ಯಕೃತ್ತಿನ ಕಾಯಿಲೆ ಹಾಗೂ ಮಕ್ಕಳಲ್ಲಿ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂಬ ಮಾಹಿತಿಗಳಿವೆ. ಇನ್ನು ತಯಾರಿಕಾ ಘಟಕಗಳ ಅಶುಚಿತ್ವ ಮತ್ತು ಕಲುಷಿತ ನೀರಿನ ಬಳಕೆಯು ಟೈಫಾಯ್ಡ್ ಹಾಗೂ ಕಾಲರಾದಂತಹ ರೋಗಗಳಿಗೆ ದಾರಿಯಾಗಿದೆ. ಅಂಕಿ ಅಂಶಗಳ ಪ್ರಕಾರ ಇಂತಹ ಪಾನೀಯಗಳಲ್ಲಿ ಶೇ.99ರಷ್ಟು ಹಣ್ಣಿನ ಅಂಶವೇ ಇರುವುದಿಲ್ಲ. ಸರ್ಕಾರವು ಆಹಾರ ಸುರಕ್ಷತಾ ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಕಲಬೆರಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…