ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಅಡಿಯಲ್ಲಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಚರ್ಚಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಇಲ್ಲಿಯವರೆಗೂ ನಡೆದಿರುವ ಎಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಯಾವುದೇ ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷದ ಚಿಹ್ನೆಯ ಗುರುತಿನಡಿ ಸ್ಪಽಸಲು ಅವಕಾಶವಿರಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಬಳಸಿದರೆ ಅದು ಹಳ್ಳಿ ಜನರಲ್ಲಿ ರಾಜಕೀಯ ವೈಷಮ್ಯಕ್ಕೆ ಕಾರಣವಾಗಿ ಸಾಮರಸ್ಯ ಕದಡುತ್ತದೆ. ಇದೇ ಕಾರಣದಿಂದ ಈವರೆಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳ ಬಳಕೆಗೆ ಅವಕಾಶ ನೀಡಿಲ್ಲ. ಆದ್ದರಿಂದ ಸರ್ಕಾರ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ತರುವುದು ಸೂಕ್ತವಲ್ಲ. ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಬೆಂಬಲ ಇರಲಿ. ಆದರೆ ಚಿಹ್ನೆಗಳ ಬಳಕೆ ಬೇಡ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…