ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ.
ಮಕ್ಕಳಲ್ಲಿ ಓದುವ ಹವ್ಯಾಸವನ್ನು ರೂಢಿಸುವುದಕ್ಕಾಗಿ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ‘ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಕೋವಿಡ್ ಸಂಕಷ್ಟದ ಕಾಲದಲ್ಲಿ ಶಾಲಾ-ಕಾಲೇಜುಗಳು ತಿಂಗಳಾನುಗಟ್ಟಲೆ ಬಂದ್ ಆಗಿದ್ದವು. ಆಗ ಮಕ್ಕಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿತ್ತು.
ಆ ಪರಿಪಾಟ ಅಭ್ಯಾಸವಾಗಿ ಹೋಗಿ ಮಕ್ಕಳು ಈ ಸ್ಮಾರ್ಟ್‌ಫೋನ್ ಗಳಿಗೆ ಜೋತುಬಿದ್ದಿದ್ದಾರೆ. ಈಗ ಶಾಲೆಗಳಲ್ಲಿ ತರಗತಿಗಳು ನಡೆಯುತ್ತಿದ್ದರೂ ಮಕ್ಕಳು ಮಾತ್ರ ಸ್ಮಾರ್ಟ್ ಫೋನ್‌ಗಳನ್ನು ಬಿಟ್ಟು ಹೊರಬಂದಿಲ್ಲ. ಇವೆಲ್ಲವನ್ನು ಮನಗಂಡ ವಿಶ್ವಸಂಸ್ಥೆಯು ೬ ರಿಂದ ೧೦ ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ನಲ್ಲಿ ಕಲಿಕೆ ಸರಿಯಲ್ಲ ಎಂದು ಶಿಫಾರಸ್ಸು ಮಾಡಿದ್ದು, ಸರ್ಕಾರವೂ ಈ ವಿನೂತನ ಯೋಜನೆಯನ್ನು ರೂಪಿಸಿ ಪ್ರತಿ ಶಾಲೆಯಲ್ಲಿಯೂ ಗ್ರಂಥಾಲಯವಿರಬೇಕು ಮತ್ತು ೧ರಿಂದ ೧೦ನೇ ತರಗತಿಯವರೆಗಿನ ಮಕ್ಕಳು ಗ್ರಂಥಾಲಯಗಳಲ್ಲಿ ಓದಬೇಕು ಎಂದು ಕಡ್ಡಾಯಗೊಳಿಸಿದೆ. ಇದು ಮಕ್ಕಳಿಗೆ ಓದುವ ಹವ್ಯಾಸವನ್ನು ರೂಢಿಸಲು ಸಹಕಾರಿಯಾಗಿದೆ.
-ಕೆ. ಎಸ್. ಸುರೇಶ್, ಮುಖ್ಯ ಶಿಕ್ಷಕರು, ಸರಗೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…