ಓದುಗರ ಪತ್ರ

ಓದುಗರ ಪತ್ರ | ‘ವೈಕಂ’ ದೇವನೂರಿಗೆ ಸಂದ ಗೌರವ

ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿ ರುವ ದೇವನೂರ ಮಹಾದೇವರವರಿಗೆ ಲಭಿಸಿ ರುವುದು ಹೆಮ್ಮೆಯ ವಿಚಾರ.

ಕೇರಳದ ವೈಕಂನಲ್ಲಿ ಪೆರಿಯಾರ್‌ರವರ ನೇತೃತ್ವದಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ವೈಕಂ ಸತ್ಯಾಗ್ರಹ ನೂರು ವರ್ಷಗಳನ್ನು ಪೂರೈಸಿದ ನೆನಪಿನಾರ್ಥ ಈ ಪ್ರಶಸ್ತಿಯನ್ನು ತಮಿಳುನಾಡು ಸರ್ಕಾರ ನೀಡಿದೆ.

ಅಂದು ಯಾವ ದೇವಸ್ಥಾನದ ಪ್ರವೇಶಕ್ಕಾಗಿ ವೈಕಂನಲ್ಲಿ ಹೋರಾಟ ನಡೆದಿತ್ತೋ ಅದೇ ದೇವಸ್ಥಾನದ ಪಕ್ಕದಲ್ಲಿ ಇಂದು ವೈಕಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರುವುದು ಹೆಮ್ಮೆಯ ವಿಚಾರ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುವವರನ್ನು ಗುರುತಿಸಿ ಅವರಿಗೆ ನೀಡುವ ಪ್ರಶಸ್ತಿಯಾ ಗಿದ್ದು, ಕರ್ನಾಟಕದ ಹಿರಿಯ ಸಾಹಿತಿ ದೇವನೂರ ಮಹಾದೇವರವರು ಭಾಜನರಾಗಿರುವುದು ಮೂರೂ ರಾಜ್ಯಗಳನ್ನು ಒಗ್ಗೂಡಿಸಿದಂತಾಗಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

3 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

4 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

4 hours ago