Mysore
20
broken clouds

Social Media

ಬುಧವಾರ, 13 ನವೆಂಬರ್ 2024
Light
Dark

ಓದುಗರ ಪತ್ರ| ಉಪನ್ಯಾಸಕರ ನೇಮಕಾತಿಯಾಗಲಿ

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಹಂತಹಂತವಾಗಿ ಅವುಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇದು ಉತ್ತಮ ಬೆಳವಣಿಗೆ. ಈಗಾಗಲೇ ವಯೋಮಿತಿ ಮೀರುವ ಹಂತಕ್ಕೆ ಬಂದಿರುವ ಕೆಲ ಉಪನ್ಯಾಸಕರು ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ, ಇನ್ನೂ ಕೆಲವರು ಖಾಸಗಿ ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಡಿಮೆ ಸಂಬಳ ಮತ್ತು ಅಽಕ ಕೆಲಸದ ಒತ್ತಡದಿಂದಾಗಿ ಇವರ ಜೀವನಮಟ್ಟ ಸುಧಾರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವಯೋಮಿತಿ ಮೀರುವ ಮುನ್ನವೇ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದರೆ ಅನೇಕ ಅತಿಥಿ ಉಪನ್ಯಾಸಕರಿಗೆ ಉಪಯೋಗವಾಗಲಿದೆ. ಈ ಬಗ್ಗೆ ಶಿಕ್ಷಣ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ.

-ಎ. ಎಸ್. ಗೋವಿಂದೇಗೌಡ, ಉಪನ್ಯಾಸಕ, ಮೈಸೂರು.

Tags: