Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

dgp murder case

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು ಮಾತ್ರ ಈಗ ನಡೆಸಲಾಗಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹೇಳಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ.

ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆ ಫೆ.28ರಂದು ಪ್ರಾರಂಭವಾಗುತ್ತಿದ್ದು, ಉಳಿದಿರುವ ಕೆಲವೇ ದಿನಗಳಲ್ಲಿ ಶಿಕ್ಷಕರು
ಹೆಚ್ಚಿನ ತರಬೇತಿ ನೀಡುವ ಮೂಲಕ ಫಲಿತಾಂಶ ಹೆಚ್ಚಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

Tags:
error: Content is protected !!