೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್‌ಎಸ್ ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಧೈರ್ಯವಾಗಿ ಎದುರಿಸುತ್ತೇವೆ ಎಂಬ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಶಾಂತವಾಗಿ ಕುಳಿತು ಓದಿದ ವಿಷಯಗಳನ್ನು ನೆನಪಿಸಿಕೊಂಡು ಬರೆಯಬೇಕು. ಗಾಬರಿಗೊಂಡಷ್ಟು ಓದಿದ ವಿಚಾರಗಳು ಮರೆತು ಹೋಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸೂಕ್ಷ ವಾಗಿ ಗಮನಿಸಿ, ಚೆನ್ನಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಕಷ್ಟದ ಪ್ರಶ್ನೆಗಳಿಗೆ ಕೊನೆಯಲ್ಲಿ ಉತ್ತರಿಸಬೇಕು. ಸಮಯವನ್ನು ವ್ಯರ್ಥ ಮಾಡದಂತೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಬೇಕು. –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…