ಓದುಗರ ಪತ್ರ

ಓದುಗರ ಪತ್ರ | ಆತಂಕ ಬಿಟ್ಟು ಪರೀಕ್ಷೆ ಬರೆಯಿರಿ

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ ಆತಂಕವಿದೆ. ಎಸ್‌ಎಸ್ ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಈ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಧೈರ್ಯವಾಗಿ ಎದುರಿಸುತ್ತೇವೆ ಎಂಬ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಶಾಂತವಾಗಿ ಕುಳಿತು ಓದಿದ ವಿಷಯಗಳನ್ನು ನೆನಪಿಸಿಕೊಂಡು ಬರೆಯಬೇಕು. ಗಾಬರಿಗೊಂಡಷ್ಟು ಓದಿದ ವಿಚಾರಗಳು ಮರೆತು ಹೋಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಸೂಕ್ಷ ವಾಗಿ ಗಮನಿಸಿ, ಚೆನ್ನಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಕಷ್ಟದ ಪ್ರಶ್ನೆಗಳಿಗೆ ಕೊನೆಯಲ್ಲಿ ಉತ್ತರಿಸಬೇಕು. ಸಮಯವನ್ನು ವ್ಯರ್ಥ ಮಾಡದಂತೆ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಬೇಕು. –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

12 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

16 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

16 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

16 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

19 hours ago