ಓದುಗರ ಪತ್ರ

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಭಯವನ್ನು ನಿವಾರಿಸಿ ವಿಶೇಷ ಬೋಧನೆ ಮಾಡಿ ಅವರನ್ನು ಪರೀಕ್ಷೆಗೆ ಸಿದ್ಧಗೊಳಿಸಲಾಗಿದೆ. ಮೈಸೂರು ಆಕಾಶವಾಣಿಯಿಂದಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗೆ ಸಿದ್ಧರಾಗೋಣ ಬನ್ನಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಹಲವಾರು ಕಂತುಗಳಲ್ಲಿ ನುರಿತ ಶಿಕ್ಷಕರನ್ನು ಆಹ್ವಾನಿಸಿ ವಿಷಯ ತಜ್ಞರೊಡನೆ ವಿಷಯಗಳನ್ನು ಚರ್ಚಿಸಿ ತೇರ್ಗಡೆ ಹೊಂದುವುದು ಹಾಗೂ ಅಂಕಗಳನ್ನು ಗಳಿಸುವ ಸುಲಭ ವಿಧಾನದ ಬಗ್ಗೆ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯವನ್ನು ಬಿಟ್ಟು ಹಬ್ಬದಂತೆ ಸಂಭ್ರಮಿಸಿ ಬರೆಯಬೇಕು. ಪರೀಕ್ಷೆಗೆ ಬೇಕಾದಂತ ಪ್ರವೇಶಪತ್ರ (ಹಾಲ್ ಟಿಕೆಟ್), ಪೆನ್ನು, ಪೆನ್ಸಿಲ್‌ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವ ಅರ್ಧ ಗಂಟೆ ಮುಂಚೆ ಹಾಜರಾಗಬೇಕು, ನಗರ ಪ್ರದೇಶದ ವಿದ್ಯಾರ್ಥಿಗಳೂ ಆತುರ ಪಡದೆ ಸಕಾಲಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು.

ಪೋಷಕರು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷೆ ಮುಗಿದ ನಂತರ ಮಕ್ಕಳನ್ನು ಮನೆಗೆ ಕರೆತರಬೇಕು.
-ಕಣ್ಣೂರು ವಿ.ಗೋವಿಂದಾಚಾರಿ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

7 mins ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

23 mins ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

13 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

15 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

15 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

15 hours ago