ಓದುಗರ ಪತ್ರ

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ ಇದೆ ಎಂಬ ಆರೋಪದಡಿ ಹಲವರು ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುತ್ತಲೇ ಬಂದಿದ್ದಾರೆ.

ಇಂತಹ ಬೆಳವಣಿಗೆಯ ನಡುವೆಯೇ ಇದೀಗ ಕರಡು ಪಟ್ಟಿಯಲ್ಲಿ ಸಾವಿರಾರು ಹೆಸರುಗಳು ಡಿಲಿಟ್ ಆಗಿರುವ ಮಾಹಿತಿ ತಿಳಿದು ಕೆಲವರು ಬೇಸರ ವ್ಯಕ್ತಪಡಿಸುತ್ತಿರುವ ನಡುವೆ, ಪಟ್ಟಿಯಲ್ಲಿ ಹೆಸರು ಇರುವವರು ಕೂಡ ತಮ್ಮ ಸಂಪೂರ್ಣ ಮಾಹಿತಿ ಅಂದರೆ ಹೆಸರು, ತಂದೆ ಹೆಸರು, ಗಂಡು-ಹೆಣ್ಣುಹಾಗೂ ಜನ್ಮ ದಿನಾಂಕ ಸರಿಯಾಗಿದೆಯೇ ಎಂಬುದನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಏಕೆಂದರೆ ನಾನು ಈ ಬಗ್ಗೆ ನಮ್ಮ ಮನೆಯವರ ಮಾಹಿತಿಯನ್ನು ಕರಡು ಪಟ್ಟಿಯಲ್ಲಿ ಪರಿಶೀಲಿಸಿದಾಗ ನಮ್ಮ ಮನೆಯಲ್ಲಿರುವ ನಾಲ್ವರ ಪೈಕಿ ನನ್ನ ಮಗನ ವಯಸ್ಸು ನಾವು ಮಾಹಿತಿ ಕೊಟ್ಟಿರುವ ಪ್ರಕಾರ ೨೯ ವರ್ಷ ಎಂಬುದಾಗಬೇಕಿತ್ತು. ಆದರೆ ಕರಡು ಪಟ್ಟಿಯಲ್ಲಿ ಅವನ ವಯಸ್ಸು ೪೨ ವರ್ಷ ಎಂದು ನಮೂದಾಗಿದೆ. ಇದು ನಮ್ಮ ಒಂದು ಮನೆಯ ಸಮಸ್ಯೆಯಲ್ಲ, ನಾನು ಕೆಲವು ಬಿಎಲ್‌ಒಗಳನ್ನುವಿಚಾರಿಸಿದಾಗ ಅವರು ಕೊಟ್ಟ ಮಾಹಿತಿಯಂತೆ ಕೆಲವರಿಗೆ ತಂದೆ ಹೆಸರು ಬದಲಾಗಿದೆ, ಮತ್ತೆ ಕೆಲವರಿಗೆ ಗಂಡು ಎಂಬ ಬದಲು ಹೆಣ್ಣು, ಹೆಣ್ಣು ಎಂಬ ಜಗದಲ್ಲಿ ಗಂಡು ಎಂದು ನಮೂದಾಗಿದೆಯಲ್ಲದೆ, ಮನೆ ನಂಬರ್ ಹಾಗೂ ಜನ್ಮ ದಿನಾಂಕಗಳೂ ಬದಲಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಕಂಪ್ಯೂಟರ್ ಆಪರೇಟರ್‌ಗಳೇ ಕಾರಣ ಎಂಬ ಮಾಹಿತಿಯೂ ಇದೆ. ಇದು ನಿಜವೇ ಆದರೆ ಇಂತಹ ತಪ್ಪು ಮಾಡಿರುವವರ ವಿರುದ್ಧ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು.

ಹಾಗೆಯೇ ತಿದ್ದುಪಡಿಗೆ ಹೆಚ್ಚಿನ ಅವಕಾಶ ನೀಡಿ, ಮತ್ತೆ ಇಂತಹ ಪ್ರಮಾದ ಆಗದಂತೆ ಕ್ರಮ ವಹಿಸಬೇಕಾಗಿದೆ.

-ಎಂ.ಮಹೇಶ್ ನಿಲಸೋಗೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago