ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಅನೇಕ ಖಾಸಗಿ ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಲ ಕೋಚಿಂಗ್ ಸೆಂಟರ್‌ಗಳು ಹಾಗೂ ಟ್ಯೂಷನ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಜಾಹೀರಾತುಗಳನ್ನು ನೀಡಿ ವಿದ್ಯಾರ್ಥಿಗಳನ್ನು ಸೆಳೆಯಲಾಗುತ್ತಿದೆ. ತರಬೇತಿ ನೀಡಲಾಗುವುದು, ಖಚಿತವಾಗಿ ಉದ್ಯೋಗ ಸಿಗುವಂತೆ
ಮಾಡಲಾಗುವುದು ಎಂದು ನಂಬಿಸಿ ಸಾವಿರಾರು ರೂ. ವಸೂಲಿ ಮಾಡುತ್ತಿದ್ದಾರೆ. ಹೀಗೆ ವಿದ್ಯಾರ್ಥಿಗಳನ್ನು ನಂಬಿಸಿ ಹಣ ವಸೂಲಿ ಮಾಡುವ ಬಹುತೇಕ ಕೋಚಿಂಗ್ ಸೆಂಟರ್‌ಗಳು ಯಾವುದೇ ರೀತಿಯ ಗುಣಮಟ್ಟದ ಶಿಕ್ಷಣವನ್ನು ನೀಡದೆ, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸವನ್ನೂ ಕೊಡಿಸದೆ ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ವ್ಯರ್ಥ ಮಾಡುತ್ತಿವೆ ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಆದ್ದರಿಂದ ಶಿಕ್ಷಣ ಇಲಾಖೆಯು ಟ್ಯೂಷನ್ ಮತ್ತು ಕೋಚಿಂಗ್ ಸೆಂಟರ್ ಗಳನು ನಡೆಸುವವರು ಕಡ್ಡಾಯವಾಗಿ ಇಲಾಖೆಯ ಅನುಮತಿ ಪಡೆಯುವಂತೆ ಆದೇಶಿಸಬೇಕಿದೆ. ಅಲ್ಲದೆ ಇಲಾಖೆಯೂ ಅನುಮತಿ ನೀಡುವ ಮುನ್ನ ಈ ಕೋಚಿಂಗ್ ಸೆಂಟರ್‌ಗಳು ಹಾಗೂ ಟ್ಯೂಷನ್‌ಗಳನ್ನು ಪರಿಶೀಲಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…