ವಿಧಾನಸಭಾ ಅಧಿವೇಶನದಲ್ಲಿ ಕೆಲ ಶಾಸಕರು ಪ್ರತಿಭಟನೆ ಮಾಡುವ ಭರದಲ್ಲಿ ಕಾಗದ ಪತ್ರಗಳನ್ನು ಸಭಾಧ್ಯಕ್ಷರ ಪೀಠದತ್ತ ತೂರಿ ಆ ಸ್ಥಾನಕ್ಕೆ ಅಗೌರವ ತೋರಿರುವುದು ನಿಜಕ್ಕೂ ಖಂಡನೀಯ.
ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವ ಎಲ್ಲ ಶಾಸಕರೂ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಗಳನ್ನು ಕಂಡುಕೊಳ್ಳಬೇಕು. ಹಾಗೆಯೇ ವಿರೋಧ ಪಕ್ಷದ ಶಾಸಕರೂ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸುವ ಹಾಗೂ ಅವುಗಳ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದರೂ ಆ ಪ್ರತಿಭಟನೆಗಳು ಸದನದ ಪೀಠದ ಗೌರವಕ್ಕೆ ಧಕ್ಕೆಯಾಗದಂತಿರಬೇಕು.
ಆದರೆ, ಬಿಜೆಪಿಯ ಕೆಲ ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಅಗೌರವ ತೋರಿದ್ದಾರೆ. ಪ್ರತಿಭಟನೆ ಮಾಡುವ ನೆಪದಲ್ಲಿ ಸಭಾಧ್ಯಕ್ಷರ ಪೀಠದ ಕಡೆಗೆ ಕಾಗದಪತ್ರಗಳನ್ನು ಎಸೆದು, ಸಭಾಧ್ಯಕ್ಷರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ನಿಜಕ್ಕೂ ಖಂಡನೀಯ.
ಇದು ಸದನದ ಸಾರ್ವಭೌಮತ್ವಕ್ಕೆ ಮಾಡಿದ ಅವಮಾನ. ಶಾಂತಿ ರೀತಿಯಲ್ಲಿ ವರ್ತಿಸುವಂತೆ ಸಭಾಧ್ಯಕ್ಷರು ಪದೇ ಪದೇ ವಿರೋಧ ಪಕ್ಷದ ಶಾಸಕರಲ್ಲಿ ಮನವಿ ಮಾಡಿದರೂ ಕೇಳದೆ ಶಾಸಕರು ಪ್ರತಿಭಟನೆ ಮಾಡುತ್ತಾ ಸಭಾಧ್ಯಕ್ಷರ ಪೀಠಕ್ಕೆ ಅಪಮಾನ ಮಾಡಿದ್ದಾರೆ. ಶಾಸಕರ ವರ್ತನೆಯಿಂದ ಬೆಸತ್ತು ಸಭಾಧ್ಯಕ್ಷರು ಅವರನ್ನು ಸದನದಿಂದ 6 ತಿಂಗಳ ಕಾಲ ಅಮಾನತ್ತು ಮಾಡಿದ್ದಾರೆ. ಈ ಕ್ರಮ ಇತರೆ ಶಾಸಕರಿಗೆ ಪಾಠವಾಗಿದೆ.
-ಪಿ.ರಾಜು ಅಶೋಕಪುರಂ, ಕೆಪಿಸಿಸಿ ಸದಸ್ಯರು ಸಂಯೋಜಕರು, ಮೈಸೂರು.
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…