ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಡಾ. ಬಿ. ಆರ್. ಅಂಬೇಡ್ಕರ್‌ರವರು ಈ ಮೀಸಲಾತಿ ಯನ್ನು ಜಾರಿಗೆ ತಂದರು.
ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದು ೭೦ ವರ್ಷ ಗಳೇ ಕಳೆದರೂ ಕೆಲವು ರಾಜಕಾರಣಿಗಳು ಈ ಮೀಸಲಾತಿ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ನ್ಯಾಯಾಲಯ ನೀಡಿ ರುವ ಈ ತೀರ್ಪು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸಹಕಾರಿ ಯಾಗಲಿದೆ. ಒಳ ಮೀಸಲಾತಿ ಜಾರಿ ಮಾಡುವುದರಿಂದ ಉಪಜಾತಿ ಗಳ ಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ವರ್ಷ ಗಳಿಂದ ಅನೇಕ ಹೋರಾಟಗಳನ್ನು ಮಾಡಲಾಗಿತ್ತು. ಅದಕ್ಕೆ ಈಗ ಫಲ ಸಿಕ್ಕಂತಾಗಿದೆ. ಒಳ ಮೀಸಲಾತಿ ಜಾರಿಯಿಂದಾಗಿ ದೇಶದಲ್ಲಿರುವ ಪ್ರತಿಯೊಂದು ಉದ್ಯೋಗ ಮತ್ತು ರಾಜಕೀಯ ರಂಗದಲ್ಲಿಯೂ ಎಲ್ಲರಿಗೂ ಅವಕಾಶ ಸಿಕ್ಕಂತಾಗುತ್ತದೆ.
-ಜಿ. ಎನ್. ಕಾರ್ತಿಕ್, ವಕೀಲರು, ಗುಂಡ್ಲುಪೇಟೆ.





