ಓದುಗರ ಪತ್ರ

ಓದುಗರ ಪತ್ರ| ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ

ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಡಾ. ಬಿ. ಆರ್. ಅಂಬೇಡ್ಕರ್‌ರವರು ಈ ಮೀಸಲಾತಿ ಯನ್ನು ಜಾರಿಗೆ ತಂದರು.

ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದು ೭೦ ವರ್ಷ ಗಳೇ ಕಳೆದರೂ ಕೆಲವು ರಾಜಕಾರಣಿಗಳು ಈ ಮೀಸಲಾತಿ ವ್ಯವಸ್ಥೆಯನ್ನು ತಮ್ಮ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಈಗ ನ್ಯಾಯಾಲಯ ನೀಡಿ ರುವ ಈ ತೀರ್ಪು ಎಲ್ಲ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸಹಕಾರಿ ಯಾಗಲಿದೆ. ಒಳ ಮೀಸಲಾತಿ ಜಾರಿ ಮಾಡುವುದರಿಂದ ಉಪಜಾತಿ ಗಳ ಲ್ಲಿರುವ ಅತಿ ಹಿಂದುಳಿದ ಜಾತಿಗಳಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ವರ್ಷ ಗಳಿಂದ ಅನೇಕ ಹೋರಾಟಗಳನ್ನು ಮಾಡಲಾಗಿತ್ತು. ಅದಕ್ಕೆ ಈಗ ಫಲ ಸಿಕ್ಕಂತಾಗಿದೆ. ಒಳ ಮೀಸಲಾತಿ ಜಾರಿಯಿಂದಾಗಿ ದೇಶದಲ್ಲಿರುವ ಪ್ರತಿಯೊಂದು ಉದ್ಯೋಗ ಮತ್ತು ರಾಜಕೀಯ ರಂಗದಲ್ಲಿಯೂ ಎಲ್ಲರಿಗೂ ಅವಕಾಶ ಸಿಕ್ಕಂತಾಗುತ್ತದೆ.

-ಜಿ. ಎನ್. ಕಾರ್ತಿಕ್, ವಕೀಲರು, ಗುಂಡ್ಲುಪೇಟೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

39 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

1 hour ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago