ಓದುಗರ ಪತ್ರ
ಜೂನ್ ಸಮೀಪಿಸುತ್ತಿದ್ದಂತೆ ಶಾಲೆ ಪುನಾರಂಭಗೊಳ್ಳುವ ಸಂಭ್ರಮ ಎಲ್ಲೆಡೆ ಕಾಣಿಸುತ್ತದೆ. ಸರ್ಕಾರಿ ಶಾಲೆಗಳನ್ನು ಅವಲಂಬಿಸಿರುವ ಮಕ್ಕಳು ಶಾಲೆಗಳಲ್ಲಿ ಕೊಡುವ ಪುಸ್ತಕ, ಸಮವಸಕ್ಕಾಗಿ ಕಾಯುತ್ತಿರುತ್ತಾರೆ. ಕೆಲವು ಬಾರಿ ಶಾಲೆ ತೆರೆದು ತಿಂಗಳಾದರೂ ಮಕ್ಕಳು ಅನೇಕ ಸೌಲಭ್ಯಗಳಿಂದ ವಂಚಿತರಾಗುವುದರ ಜತೆಗೆ ಪಠ್ಯಪುಸ್ತಕ ಸಿಗದ ಕಾರಣ ಓದುವ ಆಸಕ್ತಿ ಕಳೆದುಕೊಳ್ಳುತ್ತಾರೆ. ಜೂನ್ ವೇಳೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ರೈನ್ ಕೋಟ್ ಜೊತೆಗೆ ಛತ್ರಿಯನ್ನು ವಿತರಿಸಿದರೆ ಅನುಕೂಲವಾಗುತ್ತದೆ. ಅಲ್ಲದೇ ಶಾಲೆ ಪುನಾರಂಭಗೊಳ್ಳುವ ಕೆಲವು ದಿನಗಳ ಮುಂಚೆ ಮುಖ್ಯ ಶಿಕ್ಷಕರು ಶಾಲೆಗಳನ್ನು ಪರಿಶೀಲಿಸಿ ಸ್ವಚ್ಛಗೊಳಿಸಲು ಕ್ರಮ ವಹಿಸಿ ಪೂರ್ವ ಸಿದ್ಧತೆಯನ್ನು ಕೈಗೊಳ್ಳಬೇಕು.
– ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ. ಎಂ. ಕಾಲೋನಿ, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…