ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಅವರಿಗೆ ಈ ಹೊಸ ಜವಾಬ್ದಾರಿ ಸವಾಲುಗಳಿಂದ ಕೂಡಿದೆ.
ಮೊದಲನೆಯದಾಗಿ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆರಿಸಿರುವುದರ ಹಿಂದಿನ ಪ್ರಮುಖ ಉದ್ದೇಶವೆಂದರೆ, ಸರ್ಕಾರಕ್ಕೆ ಹೊಸ ರೂಪ ನೀಡುವುದು. ನಗರ ಪ್ರದೇಶದ ಮತದಾರರನ್ನು ಸೆಳೆಯುವಲ್ಲಿ ಮತ್ತು ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಅವರ ಪಾತ್ರ ನಿರ್ಣಾಯಕ ವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ರಾಜ್ಯದ ಐದು ಮಹತ್ವಾಕಾಂಕ್ಷೆಯ ‘ಗ್ಯಾರಂಟಿ’ ಯೋಜನೆಗಳನ್ನು ಮುಂದು ವರಿಸುತ್ತಲೇ ರಾಜ್ಯದ ಬೊಕ್ಕಸದ ಮೇಲೆ ಬೀಳುವ ಆರ್ಥಿಕ ಒತ್ತಡವನ್ನು ನಿಭಾಯಿಸುವುದು ಅತ್ಯಂತ ಕಠಿಣ ಕೆಲಸವಾಗಿದೆ.
ಹೊಸ ಸಂಪುಟವನ್ನು ರಚಿಸುವುದು ಶಿವಕುಮಾರ್ ಅವರ ಮೊದಲ ದೊಡ್ಡ ಸವಾಲು. ಹಿರಿಯ ಶಾಸಕರು, ವಿವಿಧ ಪ್ರದೇಶಗಳ ನಾಯಕರು ಮತ್ತು ಪ್ರಭಾವಿ ಸಮುದಾಯಗಳ ಆಕಾಂಕ್ಷೆಗಳನ್ನು ಸಮತೋಲನದಲ್ಲಿಟ್ಟು ಕೊಂಡು ಸಚಿವ ಸಂಪುಟವನ್ನು ರೂಪಿಸುವುದು ಅನಿವಾರ್ಯವಾಗಿದೆ. ಸಿದ್ದರಾಮಯ್ಯನವರ ಬೆಂಬಲಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿಯೂ ಅವರ ಮೇಲಿದೆ.
ಸಿದ್ದರಾಮಯ್ಯನವರು ಕಟ್ಟಿಕೊಟ್ಟ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಮತಬ್ಯಾಂಕ್ ಅನ್ನು ಉಳಿಸಿಕೊಳ್ಳುವುದು ಡಿ. ಕೆ. ಶಿವಕುಮಾರ್ ಅವರಿಗೆ ರಾಜಕೀಯವಾಗಿ ಅತ್ಯಂತ ನಿರ್ಣಾಯಕ. ಇತ್ತೀಚೆಗೆ ಸಲ್ಲಿಕೆಯಾಗಿರುವ ಜತಿ ಗಣತಿ ವರದಿಯನ್ನು ಜರಿಗೊಳಿಸುವ ವಿಷಯದಲ್ಲಿ ಅವರು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳ ವಿರೋಧವನ್ನು ಕಟ್ಟಿಕೊಳ್ಳದೆಯೇ, ಅಹಿಂದ ವರ್ಗದ ನಿರೀಕ್ಷೆಗಳನ್ನು ಪೂರೈಸಬೇಕಾದ ಇಕ್ಕಟ್ಟಿನಲ್ಲಿದ್ದಾರೆ.
ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಸುಮಾರು ರೂ. ೫೧,೦೦೦ ಕೋಟಿ ವೆಚ್ಚವಾಗುತ್ತಿದೆ. ಇವುಗಳ ಜರಿಯೊಂದಿಗೆ ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡುವುದು, ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸು ಒದಗಿಸುವುದು ಮತ್ತು ಅಭಿವೃದ್ಧಿ ಕಾರ್ಯಗಳನ್ನು ನಿಲ್ಲದಂತೆ ನೋಡಿಕೊಳ್ಳುವುದು ದೊಡ್ಡ ಆರ್ಥಿಕ ಸವಾಲಾಗಿದೆ. ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯನ್ನು ಸಾಕಾರಗೊಳಿಸುವುದು ಮತ್ತು ನಗರದ ಸಂಚಾರ ದಟ್ಟಣೆ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಸಮಸ್ಯೆಗಳನ್ನು ಬಗೆಹರಿಸುವುದು ಅವರ ಮೊದಲ ಆದ್ಯತೆಗಳಲ್ಲಿ ಒಂದಾಗಿದೆ. ಅದೇ ಸಮಯದಲ್ಲಿ, ಕೇವಲ ಬೆಂಗಳೂರಿಗೆ ಸೀಮಿತವಾಗದೇ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಉಳಿದ ಭಾಗಗಳ ಸಮಗ್ರ ಅಭಿವೃದ್ಧಿಯ ನಿರೀಕ್ಷೆಗಳನ್ನು ಪೂರೈಸಬೇಕಿದೆ.
ನೆಲ ಮತ್ತು ಗಡಿ ವಿವಾದಗಳ ವಿಚಾರದಲ್ಲಿ ರಾಜ್ಯದ ಹಕ್ಕುಗಳನ್ನು ಎತ್ತಿಹಿಡಿಯಬೇಕು ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಬೇಕು. ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದೊಂದಿಗೆ ಆರೋಗ್ಯಕರ ಮತ್ತು ರಚನಾತ್ಮಕ ಸಂಬಂಧವನ್ನು ಹೊಂದಿರುವುದು. ರಾಜ್ಯಕ್ಕೆ ಬರಬೇಕಾದ ಅನುದಾನ ಮತ್ತು ಯೋಜನೆಗಳ ಅನುಮೋದನೆಗೆ ಕೇಂದ್ರದೊಂದಿಗೆ ಸಮನ್ವಯ ಸಾಧಿಸುವುದು. ಪಕ್ಷ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿ, ರಾಜ್ಯದಲ್ಲಿ ಅಭಿವೃದ್ಧಿಪರ ಆಡಳಿತವನ್ನು ಮುನ್ನಡೆಸುವುದು. ಒಬ್ಬ ನಾಯಕನಾಗಿ ಈ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ರಾಜ್ಯದ ಪ್ರಗತಿಗೆ ಬುನಾದಿ ಹಾಕುವ ಜವಾಬ್ದಾರಿ ಅವರ ಮೇಲಿದೆ. ಡಿ. ಕೆ. ಶಿವಕುಮಾರ್ ಅವರು ಪಕ್ಷದ ಸಂಘಟನೆಯಲ್ಲಿ ತಮ್ಮ ಚಾಣಾಕ್ಷತೆಯನ್ನು ಸಾಬೀತುಪಡಿಸಿದ್ದಾರೆ.
೨೦೨೮ರ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಶಿವಕುಮಾರ್ ಅವರ ಈ ಅಧಿಕಾರಾವಧಿಯು ಅತ್ಯಂತ ಮಹತ್ವದ್ದಾಗಿದೆ. ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿರುವ ಅವರು, ತಮ್ಮ ರಾಜಕೀಯ ಚಾಣಾಕ್ಷತೆಯ ಮೂಲಕ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜಾ. ದಳ ಮೈತ್ರಿಯನ್ನು ಹೇಗೆ ಎದುರಿಸುತ್ತಾರೆ ಎಂಬುದು ಈಗಿನ ಪ್ರಶ್ನೆ.
ಆದರೆ, ಮುಖ್ಯಮಂತ್ರಿಯಾಗಿ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿಭಾಯಿಸುತ್ತಲೇ, ಪಕ್ಷದೊಳಗೆ ಮತ್ತು ಹೊರಗೆ ಸಮತೋಲನ ಕಾಪಾಡಿಕೊಳ್ಳುವುದು ಅವರ ರಾಜಕೀಯ ಭವಿಷ್ಯ ಮತ್ತು ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯನವರ ನಂತರದ ಈ ಹೊಸ ಅಧ್ಯಾಯವು ರಾಜ್ಯದ ರಾಜಕೀಯ ಗತಿಯನ್ನು ಹೇಗೆ ಬದಲಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಶಿವಕುಮಾರ್ ಅವರ ಹೆಗಲ ಮೇಲೆ ಈಗ ಇಡೀ ರಾಜ್ಯದ ಅಭಿವೃದ್ಧಿಯ ಹೊಣೆಗಾರಿಕೆ ಇದೆ. ಅವರ ಹಠ, ಛಲ ಮತ್ತು ನಾಯಕತ್ವದ ಶೈಲಿಯ ಮೇಲೆ ರಾಜ್ಯದ ಜನತೆ ಅಪಾರ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…