ಸಂಪಾದಕೀಯ

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಅಂದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ೬೨೫ ಅಂಕಗಳ ಬದಲಿಗೆ ೫೨೫ಕ್ಕೆ ಪರೀಕ್ಷೆಬರೆದಂತಾಗಿದೆ. ಹಾಗಾಗಿ ಹಿಂದಿ ಅಥವಾ ಯಾವುದೇ ತೃತೀಯ ಭಾಷೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ದ್ವಿಭಾಷಾ ನೀತಿ ಅನುಸರಣೆ ಬಗ್ಗೆ ಯಾವುದೇ ನಿರ್ಧಾರವನ್ನೂ ತೆಗೆದುಕೊಂಡಿಲ್ಲ. ಇದರಿಂದಾಗಿ ತ್ರಿಭಾಷಾ ಸೂತ್ರದ ನೆಪದಲ್ಲಿ ಉತ್ತರ ಭಾರತದಲ್ಲಿ ಹೆಚ್ಚು ಬಳಕೆಯಲ್ಲಿರುವ ಹಿಂದಿ ಭಾಷೆಯನ್ನು ದಕ್ಷಿಣ ಭಾರತದ ರಾಜ್ಯಗಳಿಗೂ ವಿಸ್ತರಿಸುವ ಕೇಂದ್ರ ಸರ್ಕಾರದ ಲೆಕ್ಕಾಚಾರಕ್ಕೆ ಹಿನ್ನಡೆಯಾಗಿದೆ.

ರಾಜ್ಯದಲ್ಲಿ ತಮ್ಮದಲ್ಲದ ಭಾಷೆಯಲ್ಲಿ ಕಲಿಯಲು ಪರದಾಡುತ್ತಾ, ಹೆಚ್ಚು ಮಕ್ಕಳು ಅನುತ್ತೀರ್ಣರಾಗುತ್ತಿದ್ದರು ಎಂದು ಸರ್ಕಾರದ ನಿರ್ಧಾರವನ್ನು ಶಿಕ್ಷಣ ಸಚಿವರು ಸಮರ್ಥಿಸಿಕೊಂಡಿದ್ದಾರೆ. ನೆರೆಯ ತಮಿಳುನಾಡಿನ ಶಾಲೆಗಳಲ್ಲಿ ಹಲವು ವರ್ಷಗಳ ಹಿಂದೆಯೇ ಹಿಂದಿಯನ್ನು ಕೈ ಬಿಡಲಾಗಿದೆ.

ಮಹಾರಾಷ್ಟ್ರದಲ್ಲಿ ಕೂಡ ವಿದ್ಯಾರ್ಥಿಗಳ ಮೇಲೆ ಹಿಂದಿ ಹೇರಲಾಗುತ್ತಿದೆ ಎಂದು ಆರೋಪಿಸಿ, ಈ ಭಾಷೆಯನ್ನು ಕೈಬಿಡಲಾಗಿದೆ. ಬಿಜೆಪಿ ಮೈತ್ರಿ ಸರ್ಕಾರ ಇರುವ ಮಹಾರಾಷ್ಟ್ರದಲ್ಲೇ ಹಿಂದಿಗೆ ಕೊಕ್ ನೀಡಲಾಗಿದೆ ಎಂಬುದು ಗಮನಾರ್ಹ. ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿವೆ. ಏತನ್ಮಧ್ಯೆ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಲೋಕಭವನದಿಂದ ಪತ್ರ ರವಾನೆಯಾಗಿದೆ. ಇದರ ಹಿಂದೆ ಕೇಂದ್ರ ಸರ್ಕಾರದ ಚಿತಾವಣೆ ಇದೆ ಎಂಬ ದೂರು ಕೇಳಿಬಂದಿದೆ. ರಾಜ್ಯಪಾಲರ ಈ ಪತ್ರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಡಿಸಿರುವುದನ್ನು ಕಡೆಗಣಿಸಲಾಗದು.

ಭಾರತ ಒಕ್ಕೂಟ ವ್ಯವಸ್ಥೆಯ ದೇಶವಾಗಿದೆ. ಇಲ್ಲಿ ಪ್ರಾದೇಶಿಕವಾಗಿ ಆಯಾ ಭಾಷೆಗೆ ಅದರದ್ದೇ ಆದ ಮಹತ್ವ ಇರುತ್ತದೆ. ಸ್ಥಳೀಯ ಜನಜೀವನದೊಂದಿಗೆ ಹಾಸುಹೊಕ್ಕಾಗಿರುತ್ತದೆ. ಇಂತಹ ಸನ್ನಿವೇಶದಲ್ಲಿ ಹೆಚ್ಚು ರಾಜ್ಯಗಳಲ್ಲಿ ಚಾಲ್ತಿಯಲ್ಲಿದೆ ಎಂಬ ಕಾರಣಕ್ಕೆ ಒಂದು ಭಾಷೆಯನ್ನು ಎಲ್ಲ ರಾಜ್ಯಗಳಿಗೂ ವಿಸ್ತರಿಸಲು ನಿರ್ಧಾರ ಕೈಗೊಳ್ಳುವುದು ದೇಶದ ಅಖಂಡತೆ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ ಎಂಬ ಮಾತು ಕೇಳಿಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಹಿಂದಿ ಭಾಷೆಯನ್ನು ತಿರಸ್ಕರಿಸಿರುವ ತಮಿಳುನಾಡಿಗೆ ಕೇಂದ್ರ ಸರ್ಕಾರದಿಂದ ದೊರೆಯಬೇಕಿದ್ದ ಸಾವಿರಾರು ಕೋಟಿ ರೂ. ತಪ್ಪಿಹೋಗಿದೆ. ಆದರೆ, ಮಾತೃಭಾಷೆ ಅಥವಾ ಪ್ರಾದೇಶಿಕತೆ ವಿಚಾರದಲ್ಲಿ ಬಹಳ ಗಟ್ಟಿಯಾಗಿರುವ ತಮಿಳುನಾಡು, ದ್ವಿಭಾಷಾ ನೀತಿ ಮೂಲಕ ಇಂಗ್ಲಿಷ್‌ನ್ನು ಸ್ವೀಕರಿಸಿ, ಹಿಂದಿಯನ್ನು ಹೊರದಬ್ಬಿದೆ. ದಕ್ಷಿಣ ರಾಜ್ಯಗಳ ಮೇಲೆ ಪರೋಕ್ಷವಾಗಿ ಹಿಡಿತ ಸಾಽಸುವ ಕೇಂದ್ರ ಸರ್ಕಾರದ ಯತ್ನಕ್ಕೆ ತಮಿಳುನಾಡು ಬಹುದೊಡ್ಡ ಪೆಟ್ಟು ನೀಡಿದೆ. ಇದೀಗ ಕರ್ನಾಟಕ ಕೂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ನಿರ್ಧರಿಸಿರುವುದು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ಭಾಷೆ ವಿಚಾರದಲ್ಲಿ ಎಲ್ಲ ಕನ್ನಡ ಪರ ಸಂಘಟನೆಗಳೂ ಒಗ್ಗಟ್ಟಿನಿಂದ ಹೋರಾಡಬೇಕಾಗಿದೆ. ದೇಶದಲ್ಲೇ ಗರಿಷ್ಟ ಜ್ಞಾನಪೀಠ ಪ್ರಶಸ್ತಿ ಪಡೆದಿರುವ ಭಾಷೆ ಕನ್ನಡ ಮತ್ತು ಕನ್ನಡ ಸಾಹಿತಿಗಳು. ಕಾವೇರಿಯಿಂದ ಗೋದಾವರಿವರೆಗೂ ಹಬ್ಬಿದ್ದ ಕನ್ನಡ ಭಾಷೆ ಹಾಗೂ ಕನ್ನಡದ ನೆಲದಲ್ಲಿ ಹಿಂದಿ ಬಿತ್ತನೆಯ ಬಗ್ಗೆ ಕೇಂದ್ರದ ಆಲೋಚನೆ ಸಮಂಜಸವಲ್ಲ. ಇದರ ಹಿಂದೆ ರಾಜಕೀಯ ಅಧಿಕಾರದ ಹುನ್ನಾರ ಇದೆ ಎಂಬ ಆರೋಪವೂ ಇದೆ. ರಾಜಕೀಯ ಏನೇ ಇದ್ದರೂ, ತಾಯ್ನುಡಿಯ ಅಸ್ಮಿತೆಗೆ ಧಕ್ಕೆ ಬಂದಾಗ ಯಾವುದೇ ರಾಜ್ಯದವರೂ ಸಹಿಸುವುದಿಲ್ಲ. ಇದು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನದಟ್ಟಾಗಿದೆ. ಅದರಲ್ಲಿಯೂ ಹಿಂದಿನಿಂದಲೂ ದಕ್ಷಿಣ ರಾಜ್ಯಗಳಿಗೆ ಹಿಂದಿ ಭಾಷೆಯ ಬಗ್ಗೆ ಅಷ್ಟೊಂದು ಮಮಕಾರ ಇಲ್ಲ. ಅದು ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಬೀತಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಹಿಂದಿ ಭಾಷೆ ಹೇರಿಕೆಯ ಕಸರತ್ತನ್ನು ನಿಲ್ಲಿಸಿ, ರಾಜ್ಯಗಳ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡುವುದು ಸೂಕ್ತ.

” ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿವೆ. ಏತನ್ಮಧ್ಯೆ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಲೋಕಭವನದಿಂದ ಪತ್ರ ರವಾನೆಯಾಗಿದೆ. ಇದರ ಹಿಂದೆ ಕೇಂದ್ರ ಸರ್ಕಾರದ ಚಿತಾವಣೆ ಇದೆ ಎಂಬ ದೂರು ಕೇಳಿಬಂದಿದೆ. ರಾಜ್ಯಪಾಲರ ಈ ಪತ್ರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಡಿಸಿರುವುದನ್ನು ಕಡೆಗಣಿಸಲಾಗದು.”

 

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

8 mins ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

10 mins ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

12 mins ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

3 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

3 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

3 hours ago