ಹೊಸದಿಲ್ಲಿ : ಭಾರತೀಯ ಜೀವ ವಿಮಾ ನಿಗಮ (LIC) 350 ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆಯ್ಕೆಯು ಪ್ರಿಲಿಮ್ಸ್, ಮುಖ್ಯ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದ ಮೇಲೆ ನಡೆಯಲಿದೆ.
ಪೂರ್ವಭಾವಿ ಪರೀಕ್ಷೆಯು ಅ.3 ರಂದು ನಡೆಯಲಿದೆ. ಇದರಲ್ಲಿ ಅರ್ಹತೆ ಪಡೆದವರು ನ.8 ರಂದು ಮುಖ್ಯ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ವೇತನ ೮೮, ೬೩೫ ರೂ.ಗಳಿಂದ ೧,೬೯,೦೨೫ ರೂ. ನಿಗದಿಪಡಿಸಲಾಗಿದೆ.
ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯೋಮಿತಿ ೨೦೨೫ರ ಆ.೧ರಂತೆ ೨೧ ರಿಂದ ೩೦ ವರ್ಷಗಳ ನಡುವೆ ಇರಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದ ಅಭ್ಯರ್ಥಿಗಳಿಗೆ ೫ ವರ್ಷಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ೩ ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ೧೦ ರಿಂದ ೧೫ ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಸೆ.೮ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ೭೦೦ ರೂ., ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ೮೫ ರೂ. ಶುಲ್ಕ ಪಾವತಿಸಬೇಕಿದೆ. ಅರ್ಜಿ ಸಲ್ಲಿಸಲು ಎಲ್‌ಐಸಿಯ ಅಧಿಕೃತ ವೆಬ್‌ಸೈಟ್ www.licindia.in ಸಂಪರ್ಕಿಸಿ.





