ಶಿಕ್ಷಣ

ಎಲ್‌ಐಸಿಯಲ್ಲಿ 350 ಸಹಾಯಕ ಆಡಳಿತಾಧಿಕಾರಿ ಹುದ್ದೆಗಳು

ಹೊಸದಿಲ್ಲಿ : ಭಾರತೀಯ ಜೀವ ವಿಮಾ ನಿಗಮ (LIC) 350 ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಆಯ್ಕೆಯು ಪ್ರಿಲಿಮ್ಸ್, ಮುಖ್ಯ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದ ಮೇಲೆ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆಯು ಅ.3 ರಂದು ನಡೆಯಲಿದೆ. ಇದರಲ್ಲಿ ಅರ್ಹತೆ ಪಡೆದವರು ನ.8 ರಂದು ಮುಖ್ಯ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ವೇತನ ೮೮, ೬೩೫ ರೂ.ಗಳಿಂದ ೧,೬೯,೦೨೫ ರೂ. ನಿಗದಿಪಡಿಸಲಾಗಿದೆ.

ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯೋಮಿತಿ ೨೦೨೫ರ ಆ.೧ರಂತೆ ೨೧ ರಿಂದ ೩೦ ವರ್ಷಗಳ ನಡುವೆ ಇರಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದ ಅಭ್ಯರ್ಥಿಗಳಿಗೆ ೫ ವರ್ಷಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ೩ ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ೧೦ ರಿಂದ ೧೫ ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಸೆ.೮ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ೭೦೦ ರೂ., ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳು ೮೫ ರೂ. ಶುಲ್ಕ ಪಾವತಿಸಬೇಕಿದೆ. ಅರ್ಜಿ ಸಲ್ಲಿಸಲು ಎಲ್‌ಐಸಿಯ ಅಧಿಕೃತ ವೆಬ್‌ಸೈಟ್ www.licindia.in ಸಂಪರ್ಕಿಸಿ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

11 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

11 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago