ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.
‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಟ್ರಸ್ಟ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.
ಮುಂದಿನ ದಿನಗಳಲ್ಲಿ ಇನ್‌ಇಪಿ ಆಧಾರದ ಮೇಲೆ ತರಗತಿ ಆರಂಭಿಸಲಾಗುತ್ತದೆ. ಪ್ರಾರಂಭಿಕ ಹಂತದಲ್ಲಿ 500ರಿಂದ 600 ಶಾಲೆಗಳಲ್ಲಿ ಇನ್‌ಇಪಿ ಜಾರಿ ಮಾಡಲಾಗುತ್ತದೆ. ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲ ಬೇಡಿಕೆಗಳನ್ನೂ ಸರ್ಕಾರವೇ ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.